ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ ಪರಿಶ್ರಮವೇ ಕಾರಣ, ಆದ್ದರಿಂದ ಅವರನ್ನು ಗೌರವಿಸಿ ಕೃತಜ್ಞತೆ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ,ಪೌರ ಕಾರ್ಮಿಕರೇ ಸ್ವಚ್ಛ ಭಾರತ ಅಭಿಯಾನದ ನೈಜ ರಾಯಭಾರಿಗಳು ಎಂದು ಹೇಳಿರುವ ಸಂಸದ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಮಾತುಗಳು ಮೆಚ್ಚುವಂತಹದ್ದು. ಪೌರಕಾರ್ಮಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಸಹಯೋಗದೊಂದಿಗೆ ವಿಸ್ತೃತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿದೆ, ಮೈಸೂರು ನಗರವನ್ನು ಸ್ವಚ್ಛ ನಗರವನ್ನಾಗಿ ಮಾಡಲು ಪಾಲಿಕೆ ಮತ್ತು ಪೌರಕಾರ್ಮಿಕರಷ್ಟೇ ಸಾಲದು, ಸಾರ್ವಜನಿಕರ ಸಹಕಾರವೂ ಅತ್ಯಗತ್ಯ ಎಂದು ಆಯುಕ್ತೆ ಎಂ. ಕೆ. ಸವಿತಾ ಅವರು ಹೇಳಿರುವುದು ಅನುಕರಣೀಯ. ಖುಷಿ ಕೊಡುವ ಮಾತುಗಳಷ್ಟೆ ಪೌರಕಾರ್ಮಿಕರು ಮತ್ತು ಅವರ ಕುಟುಂಬಗಳ ಸಮಸ್ಯೆಗಳಿಗೆ ಸ್ಪಂದಿಸುವುದೂ ಆಡಳಿತಗಾರರ ಹೊಣೆಗಾರಿಕೆಯಾಗಿದೆ.
– ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…