ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ಅಂಬೇಡ್ಕರ್ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು ಖಂಡನೀಯ. ಶೋಷಿತ ಸಮುದಾಯಗಳ ಪರವಾಗಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ದುಡಿದವರು ಡಾ.ಬಿ.ಆರ್.ಅಂಬೇಡ್ಕರ್. ಇಂದು ಅವರು ರಚಿಸಿದ ಸಂವಿಧಾನದ ಅಡಿಯಲ್ಲಿಯೇ ದೇಶದ ಕಾನೂನು ವ್ಯವಸ್ಥೆ ನಿಂತಿದೆ. ಸಂವಿಧಾನದ ಅಡಿಯಲ್ಲಿಯೇ ಪ್ರತಿಯೊಬ್ಬರೂ ಸಮಾನವಾಗಿ ಬದುಕುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
ಸಂವಿಧಾನ ಜಾರಿಯಾಗಿ ೭೬ ವರ್ಷಗಳನ್ನು ಪೂರೈಸಿದೆ. ದೇಶ ಬ್ರಿಟಿಷರ ಆಡಳಿತದಿಂದ ಮುಕ್ತಿಪಡೆದು ಮುಕ್ಕಾಲು ಶತಮಾನವೇ ಕಳೆದಿದೆ. ಇಷ್ಟಿದ್ದರೂ ತಳ ಸಮುದಾಯಗಳ ಮೇಲೆ ನಿರಂತರ ಶೋಷಣೆಗಳು, ದಲಿತ ಸಮುದಾಯದ ಮೇಲಿನ ದಬ್ಬಾಳಿಕೆ ನಿರಂತರವಾಗಿ ಮುಂದುವರಿದಿದ್ದು, ಇಂತಹ ಬೆಳವಣಿಗೆಯನ್ನು ಗಮನಿಸಿದರೆ ನಿಜಕ್ಕೂ ದಲಿತ ಸಮುದಾಯಕ್ಕೆ ಸ್ವಾತಂತ್ರ್ಯ ಸಿಕ್ಕಿದೆಯೇ ಎಂಬ ಅನುಮಾನ ಕಾಡುತ್ತದೆ. ವಿಶ್ವವೇ ಕೊಂಡಾಡುವ ಅಂಬೇಡ್ಕರ್‌ರವರನ್ನು ಭಾರತದಲ್ಲಿಯೇ ಕೆಲ ಕೆಟ್ಟಮನಸ್ಸುಗಳು ವಿರೋಧಿಸುವುದು ವಿಪರ್ಯಾಸವೇ ಸರಿ. ಅಂಬೇಡ್ಕರ್ ಪ್ರತಿಮೆಗಳು ಹಾಗೂ ನಾಮಫಲಕಗಳನ್ನು ಹಾಳುಮಾಡುತ್ತಿದ್ದು, ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕಿದೆ.
-ಪ್ರಕಾಶ್ ಬುದ್ಧ, ಅಧ್ಯಕ್ಷರು, ಕರ್ನಾಟಕ ಭೀಮ್ ಸೇನೆ, ಎಚ್.ಡಿ.ಕೋಟೆ ತಾ.
* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…