ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್ ಮಾಡಿಕೊಂಡಿದ್ದಾರೆ. ಅದರ ಬದಲು ಭಗವಂತನ ಹೆಸರು ಹೇಳಿದ್ದರೆ ಏಳೇಳು ಜನ್ಮಕ್ಕೆ ಸ್ವರ್ಗ ಪ್ರಾಪ್ತಿಯಾಗುತಿತ್ತು ಎಂದು ಹೇಳುವ ಮೂಲಕ ಡಾ. ಬಿ. ಆರ್. ಅಂಬೇಡ್ಕರ್‌ರವರಿಗೆ ಅಗೌರವ ತೋರಿರುವುದು ಖಂಡನೀಯ. ಅಮಿತ್ ಶಾ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ದೇಶಕ್ಕೆ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ರವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಅವರ ಅಜ್ಞಾನವನ್ನು ತೋರಿಸುತ್ತದೆ. ಅಷ್ಟಕ್ಕೂ ಅಮಿತ್ ಶಾ ಇಂದು ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ ಎಂದರೆ ಅದಕ್ಕೆ ಅಂಬೇಡ್ಕರ್‌ರವರು ಬರೆದ ಸಂವಿಧಾನ ಕಾರಣವೇ ಹೊರತು, ಭಗವಂತನಲ್ಲ ಎಂಬುದನ್ನು ಅವರು ಮರೆಯಬಾರದು. ಸದನದಲ್ಲಿ ಮಾತನಾಡುವಾಗ ಭಾಷೆಯ ಮೇಲೆ ಹಿಡಿತವಿರಬೇಕು. ವಿಶ್ವವೇ ಗೌರವಿಸುವ ಅಂಬೇಡ್ಕರ್ ಬಗ್ಗೆ ಗೌರವಯುತವಾಗಿ ಮಾತನಾಡಬೇಕು. ಅದನ್ನು ಬಿಟ್ಟು ಅಗೌರವದಿಂದ ಮಾತನಾಡುವುದು ಸಮಂಜಸವಲ್ಲ. ಸದ್ಯ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದ್ದು, ಅಮಿತ್ ಶಾ ಕೂಡಲೇ ಸದನದಲ್ಲಿಯೇ ಕ್ಷಮೆಯಾಚಿಸಬೇಕು.
-ಎಂ. ಪಿ. ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…