Andolana originals

ಓದುಗರ ಪತ್ರ: ಅಮಿತ್ ಶಾ ವಾಸ್ತವ ಅರಿಯಲಿ

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ನಾಚಿಕೆಪಡುವ ದಿನ ದೂರವಿಲ್ಲ ಎಂದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹೇಳಿದ್ದಾಗಿ ಮಾಧ್ಯಮದಲ್ಲಿ ವರದಿಯಾಗಿದೆ. ಅವರು ಇಂಗ್ಲಿಷ್ ಮಾತನಾಡುವವರು ಎನ್ನುವ ಬದಲಿಗೆ ಪ್ರಾದೇಶಿಕ ಭಾಷೆ ಮಾತನಾಡು ವವರು ಎಂದು ಹೇಳಿದ್ದರೆ ಅವರ ಹೇಳಿಕೆ ಅರ್ಥಪೂರ್ಣವಾಗುತ್ತಿತು. ಅವರ ಹೇಳಿಕೆ ಅವರು ಭಾಷೆಗಳ ವಿಷಯದಲ್ಲಿ ದೇಶದಲ್ಲಿನ ವಾಸ್ತವವನ್ನು ಅರಿತಿಲ್ಲ ಎನ್ನುವುದನ್ನು ತೋರಿಸುತ್ತದೆ. ಇಂಗ್ಲಿಷ್ ವಸಾಹತುಶಾಹಿ ಮತ್ತು ಗುಲಾಮಗಿರಿಯ ಭಾಷೆ ಎಂದು ಎಷ್ಟೇ ಬೊಬ್ಬೆ ಹೊಡೆಯಲಿ, ಅದು ಭಾರತದಲ್ಲಿ ಮತ್ತು ಭಾರತೀಯರಲ್ಲಿ ಆಳವಾಗಿ ಬೇರೂರಿದೆ.

ಕೋಟ್ಯಂತರ ಜನರಿಗೆ ದೇಶದ ಹೊರಗೆ ಮತ್ತು ಒಳಗೆ ಬದುಕು ಕಲ್ಪಿಸಿಕೊಳ್ಳಲು ಅವಕಾಶ ನೀಡಿದೆ. ಈ ದೇಶದಿಂದ ಇಂಗ್ಲಿಷ್ ಭಾಷೆಯನ್ನು ಓಡಿಸುವುದು ಕ್ರಿಕೆಟ್‌ನ್ನು ದೇಶದಿಂದ ಓಡಿಸುವಷ್ಟೇ ಅಸಾಧ್ಯದ ಮಾತು. ೧೯೪೭ರಲ್ಲಿ ಇಂಗ್ಲಿಷ್ ಮತ್ತು ಆಂಗ್ಲರ ವಿರುದ್ಧ ಆಕ್ರೋಶ ಉತ್ತುಂಗದಲ್ಲಿದ್ದಾಗ ಇಂಗ್ಲಿಷ್ ನ್ನು ಓದ್ದೋಡಿಸುವ ಅವಕಾಶವಿತ್ತು. ಆ ಅವಕಾಶ ಮತ್ತೆ ಬರುವುದು ಕೇವಲ ಕನಸು.

-ರಮಾನಂದ ಶರ್ಮಾ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

44 mins ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

55 mins ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

1 hour ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

1 hour ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

1 hour ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

1 hour ago