ಇತ್ತೀಚಿನ ದಿನಗಳಲ್ಲಿ ಪ್ರಾಮಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಹಣಗಳಿಕೆಗಾಗಿ ಸುಳ್ಳು, ಮೋಸ, ಕೊಲೆ ಸುಲಿಗೆ ಪ್ರಕರಣಗಳೇ ಹೆಚ್ಚಾಗಿ ಕಂಡುಬರುತ್ತಿವೆ. ನಿಧಿಗಾಗಿ ವಾಮಾಚಾರ ಮಾಡಿಸುವುದನ್ನು ಪತ್ರಿಕೆಗಳಲ್ಲೂ ನೋಡಿದ್ದೇವೆ. ಇದರ ನಡುವೆ ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಮನೆಯೊಂದರ ಮಾಲೀಕರು ಅಡಿಪಾಯ ತೆಗೆಯುವ ವೇಳೆಯಲ್ಲಿ ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿ ಪ್ರಾಮಾಣಿಕತೆಯನ್ನು ಮೆರೆದು ಮಾದರಿಯಾಗಿದ್ದಾರೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು



