Andolana originals

ಓದುಗರ ಪತ್ರ: ‘ವಂದೇ ಭಾರತ್’ ರೈಲಿನಲ್ಲಿ ‘ಆಂದೋಲನ’ ಪತ್ರಿಕೆ ಒದಗಿಸಲಿ

ಮಂಡ್ಯದಿಂದ ಚೆನ್ನೈಗೆ ಪ್ರಯಾಣಿಸಬೇಕಿತ್ತು. ‘ವಂದೇ ಭಾರತ್’ ರೈಲೇರಿ ನನ್ನ ಮೇಜಿನ ಬಳಿ ಬಂದಾಗ ಬರೀ ಇಂಗ್ಲಿಷ್ ಮತ್ತು ತಮಿಳು ದಿನಪತ್ರಿಕೆಗಳು ಕಣ್ಣಿಗೆ ಬಿದ್ದವು.

ಕಾಫಿ, ಟೀ, ದಿನಪತ್ರಿಕೆ, ನೀರಿನ ಬಾಟಲಿ, ಬೆಳಗಿನ ತಿಂಡಿ, ಪ್ರಯಾಣ ದರ ಎಲ್ಲಾ ಸೇರಿ ೧,೧೫೯ ರೂ. ತೆಗೆದುಕೊಳ್ಳುತ್ತಾರೆ (ಪ್ಯಾಸೆಂಜರ್ ರೈಲಿನಲ್ಲಿ ೧೬೫ ರೂ. ಮಾತ್ರ, ೨ ಗಂಟೆ ಹೆಚ್ಚುವರಿ ಪಯಣಿಸಬೇಕಷ್ಟೆ) ಆದರೆ ಕನ್ನಡ ದಿನಪತ್ರಿಕೆ ಕೊಟ್ಟಿರಲಿಲ್ಲ. ನಾನು ಅಲ್ಲಿದ್ದ ರೈಲ್ವೆ ಸಿಬ್ಬಂದಿ ಯನ್ನು ಕೇಳಿದೆ. ಅದಕ್ಕೆ ಅವರು ಇಲ್ಲಿಯವ ರೆಗೆ ಯಾರೂ ಕನ್ನಡ ದಿನಪತ್ರಿಕೆ ಕೇಳಿಲ್ಲ. ನೀವೇ ಮೊದಲು ಕೇಳಿದ್ದು ಅಂದರು. ಆದ್ದರಿಂದ ಕನ್ನಡದ ದಿನಪತ್ರಿಕೆ ಅದರಲ್ಲೂ ಸಮಾಜದಲ್ಲಿ ಸಮಾನತೆ ಮತ್ತು ವೈಚಾರಿಕತೆ ಬೆಳೆಸಲು ಕೈ ಜೋಡಿಸಿರುವ ಮೈಸೂರು ಭಾಗದ ‘ಆಂದೋಲನ’ ದಿನಪತ್ರಿಕೆಯನ್ನು ಒದಗಿಸಬೇಕು ಎಂದು ಮಂಡ್ಯ ರೈಲು ನಿಲ್ದಾಣದಲ್ಲಿ ಮನವಿ ಮಾಡುವುದಕ್ಕೆ ಒಡನಾಡಿಗಳ ಜೊತೆ ವಾಟ್ಸಾಪ್‌ನಲ್ಲಿ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಂಡಿದ್ದೇವೆ.

-ಅಭಿ ಒಕ್ಕಲಿಗ, ನಾವು ದ್ರಾವಿಡ ಕನ್ನಡಿಗರು ಚಳವಳಿ, ಮಂಡ್ಯ.

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

13 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

13 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

14 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

14 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

14 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

14 hours ago