ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ ಧ್ವಜದ ಬಣ್ಣಗಳು ಮುಂಚೂಣಿಯಲ್ಲಿ ಜಗಜಗಿಸಿರುವುದು ಪ್ರತಿಯೊಬ್ಬ ಭಾರತೀಯನ ಅಭಿಮಾನದ ಪರಾಕಾಷ್ಠೆಯಾಗಿದೆ.
ಈ ಐತಿಹಾಸಿಕ ದೃಶ್ಯವು ಕೇವಲ ಕಣ್ಣಿಗೆ ಹಬ್ಬವಲ್ಲ, ಮನಸ್ಸಿಗೆ ರೋಮಾಂಚನವನ್ನು ಉಂಟು ಮಾಡುವಂತಿತ್ತು. ಇತ್ತೀಚಿನ ವರ್ಷಗಳಲ್ಲಿ ಭಾರತ ಮತ್ತು ಯುಎಇ ನಡುವೆ ಬಲಗೊಳ್ಳುತ್ತಿರುವ ದ್ವಿಪಕ್ಷೀಯ ಸಂಬಂಧ ಹಾಗೂ ಪರಸ್ಪರ ಗೌರವಕ್ಕೆ ಇದು ಕನ್ನಡಿಯಾಗಿದೆ.
ಇದು ವಿಶ್ವ ವೇದಿಕೆಯಲ್ಲಿ ನಮ್ಮ ದೇಶಕ್ಕಿರುವ ಅಗಾಧ ಗೌರವ ಹಾಗೂ ಜನಾನುರಾಗಕ್ಕೆ ಜ್ವಲಂತ ಸಾಕ್ಷಿಯಾಗಿದೆ. ಇದರ ಜೊತೆಗೆ, ಅಫ್ಘಾನಿಸ್ತಾನದಂತಹ ರಾಷ್ಟ್ರಗಳ ಜನಸಾಮಾನ್ಯರೂ ಭಾರತದ ಧ್ವಜವನ್ನು ಹಿಡಿದು ಸಂಭ್ರಮಾಚರಣೆ ಮಾಡಿರುವುದು ನಿಜಕ್ಕೂ ಗಮನಾರ್ಹ. ವಿದೇಶಿ ನೆಲದಲ್ಲಿ ನಮ್ಮ ರಾಷ್ಟ್ರಧ್ವಜ ಹೀಗೆ ರಾರಾಜಿಸುವುದನ್ನು ಕಾಣುವುದು ನಮ್ಮ ಪ್ರಜಪ್ರಭುತ್ವದ ಬಲ ಹಾಗೂ ಜಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ನಮ್ಮ ದೇಶದ ಪ್ರಭಾವಕ್ಕೆ ಸಾಕ್ಷಿಯಾಗಿದೆ. ಅಂತರ ರಾಷ್ಟ್ರೀಯ ಸಮುದಾಯದಲ್ಲಿ ಭಾರತದ ಸ್ಥಾನಮಾನ ದಿನದಿಂದ ದಿನಕ್ಕೆ ಎತ್ತರಕ್ಕೇರುತ್ತಿರುವುದು ಹೆಮ್ಮೆಯ ಸಂಗತಿ.
-ಬಿ.ಗಣೇಶ, ಮೈಸೂರು
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…