Andolana originals

ಓದುಗರ ಪತ್ರ: ಆಪ್ ಆಧಾರಿತ ಆಟೋ ಚಾಲಕರಿಂದ ದುಬಾರಿ ಬಾಡಿಗೆ ವಸೂಲಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಓಲಾ, ಊಬರ್ ಹಾಗೂ ರ‍್ಯಾಪಿಡೋ ಆಟೋ ಚಾಲಕರು ಗ್ರಾಹಕರಿಂದ ದುಪ್ಪಟ್ಟು ಬಾಡಿಗೆ ಪಡೆಯುತ್ತಿದ್ದಾರೆ. ಉದಾಹರಣೆಗೆ ರಾತ್ರಿ ವೇಳೆ ಮೈಸೂರಿನ ರೈಲು ನಿಲ್ದಾಣದಿಂದ ಹೆಬ್ಬಾಳಕ್ಕೆ ತೆರಳಲು ಆನ್‌ಲೈನ್ ಮೂಲಕ ಆಟೋ ಬುಕ್ ಮಾಡಿದರೆ ಫೋನ್ ಮಾಡಿ ೩೦೦ ರೂ. ಕೊಟ್ಟರೆ ಮಾತ್ರ ಬರುತ್ತೇವೆ, ಇಲ್ಲದಿದ್ದರೆ ಬರುವುದಿಲ್ಲ ಎಂದು ದರ್ಪ ತೋರಿಸುತ್ತಾರೆ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಇವರಿಗೆ ಹೇಳುವವರು, ಕೇಳುವವರು ಯಾರೂ ಇಲ್ಲವೇ? ಮನಸೋ ಇಚ್ಛೆ ಹೀಗೆ ಹಣ ಕೇಳಿದರೆ ಗ್ರಾಹಕ ಎಲ್ಲಿಗೆ ಹೋಗಬೇಕು? ಮೀಟರ್ ಪ್ರಕಾರ ಹಣ ಪಡೆಯುವುದನ್ನು ನಿಲ್ಲಿಸಿ ಸುಮಾರು ವರ್ಷಗಳೇ ಕಳೆದಿವೆ. ಇದೆಲ್ಲವನ್ನು ಹೋಲಿಸಿದರೆ ಪ್ರೀಪೇಯ್ಡ್ ಆಟೋ ಸೇವೆ ಸ್ವಲ್ಪ ಪರವಾಗಿಲ್ಲ. ರಾತ್ರಿ ೯ ಗಂಟೆ ನಂತರ ಒಂದೂವರೆ ಪಟ್ಟು ದರದಂತೆ ಬಾಡಿಗೆ ಪಡೆಯುತ್ತಾರೆ. ಹೈಕೋರ್ಟ್ ಆದೇಶದಂತೆ ಇತ್ತೀಚೆಗೆ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ರದ್ದುಮಾಡಲಾಗಿದೆ. ಇದರಿಂದಲೂ ಗ್ರಾಹಕರಿಗೆ ಸಾಕಷ್ಟು ತೊಂದರೆಯಾಗಿದೆ. ಏಕೆಂದರೆ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ ಕೈಗೆಟುಕುವ ದರದಿಂದ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಿತ್ತು. ಓಲಾ, ಊಬರ್ ಹಾಗೂ  ರ‍್ಯಾಪಿಡೋ ಕಂಪೆನಿಗಳು ಹಾಗೂ ಸಾರಿಗ ಇಲಾಖೆ ಅಧಿಕಾರಿಗಳು ಆಟೋ ಚಾಲಕರಿಗೆ ಗ್ರಾಹಕರಿಂದ ಹೆಚ್ಚುವರಿ ಹಣವನ್ನು ತೆಗೆದುಕೊಳ್ಳದಂತೆ ಎಚ್ಚರಿಕೆ ನೀಡಬೇಕಿದೆ.

– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಆಟಿಕೆ ಮಾರಾಟಗಾರರ ಸುರಕ್ಷತೆಗೆ ಸರ್ಕಾರಗಳು ಮುಂದಾಗಲಿ

2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…

12 mins ago

ಕ್ರೀಡಾಲೋಕದ ಸಿಹಿ-ಕಹಿ ಮೆಲುಕು

ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…

52 mins ago

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

1 hour ago

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

4 hours ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

4 hours ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

4 hours ago