ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಈ ಪ್ರೌಢಶಾಲೆಗೆ ವಿದ್ಯಾರ್ಥಿಗಳ ಕೊರತೆ ಉಂಟಾಗಿದೆ. ಆದ್ದರಿಂದ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಸಕರು, ಸಂಸದರು ಕೂಡಲೇ ಮಾದಾಪುರ ಸರ್ಕಾರಿ ಪ್ರೌಢಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾ




