ನಂಜನಗೂಡು ತಾಲ್ಲೂಕು ಸುತ್ತೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ 2 ವರ್ಷಗಳ ಹಿಂದೆ ಉದ್ಘಾಟನೆಯಾಯಿತು. ಆದರೆ, ಅಂದಿನಿಂದಲೂ ಸಮರ್ಪಕ ವೈದ್ಯಕೀಯ ಸೇವೆಗಳು ಲಭ್ಯವಾಗುತ್ತಿಲ್ಲ. ಅಗತ್ಯ ಸಂಖ್ಯೆಯ ವೈದ್ಯರು, ಸಹಾಯಕರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲ. ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಕೂಡ ಲಭ್ಯ ಇಲ್ಲ. ಇದರಿಂದ ಗರ್ಭಿಣಿಯರು, ವಯೋವೃದ್ಧರಿಗೆ ತುರ್ತು ಚಿಕಿತ್ಸೆ ಸಿಗುವುದು ಕಷ್ಟಸಾಧ್ಯವಾಗಿದೆ. ಈ ಕೇಂದ್ರದಲ್ಲಿ ಸೂಕ್ತ ಸೌಲಭ್ಯ ಇಲ್ಲದ ಕಾರಣ, ಅನಾರೋಗ್ಯಪೀಡಿತರು ಮೈಸೂರು, ತಿ.ನರಸೀಪುರ, ತಗಡೂರು… ಹೀಗೆ ಅಕ್ಕಪಕ್ಕದ ಊರುಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅವಲಂಬಿಸುವಂತೆ ಆಗಿದೆ. ಹಾಗಾಗಿ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಸುತ್ತೂರಿನ ಪಿಎಚ್‌ಸಿಗೆ ವೈದ್ಯರು, ಸಹಾಯಕರು, ಸಿಬ್ಬಂದಿಯನ್ನು ನೇಮಕ ಮಾಡಬೇಕು. ಅಲ್ಲದೆ, ಕೇಂದ್ರಕ್ಕೆ ಕಾನೂನಾತ್ಮಕವಾಗಿ ಒದಗಿಸಬೇಕಾದ ಎಲ್ಲಾ ರೀತಿಯ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ದೊರಕಿಸಿಕೊಡಬೇಕು.
-ಆರ್.ಚಂದು, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು.





