Andolana originals

ಸುತ್ತೂರು ಪಿಎಚ್‌ಸಿಗೆ ವೈದ್ಯರನ್ನು ನೇಮಿಸಿ

ನಂಜನಗೂಡು ತಾಲ್ಲೂಕು ಸುತ್ತೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ 2 ವರ್ಷಗಳ ಹಿಂದೆ ಉದ್ಘಾಟನೆಯಾಯಿತು. ಆದರೆ, ಅಂದಿನಿಂದಲೂ ಸಮರ್ಪಕ ವೈದ್ಯಕೀಯ ಸೇವೆಗಳು ಲಭ್ಯವಾಗುತ್ತಿಲ್ಲ. ಅಗತ್ಯ ಸಂಖ್ಯೆಯ ವೈದ್ಯರು, ಸಹಾಯಕರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲ. ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಕೂಡ ಲಭ್ಯ ಇಲ್ಲ. ಇದರಿಂದ ಗರ್ಭಿಣಿಯರು, ವಯೋವೃದ್ಧರಿಗೆ ತುರ್ತು ಚಿಕಿತ್ಸೆ ಸಿಗುವುದು ಕಷ್ಟಸಾಧ್ಯವಾಗಿದೆ. ಈ ಕೇಂದ್ರದಲ್ಲಿ ಸೂಕ್ತ ಸೌಲಭ್ಯ ಇಲ್ಲದ ಕಾರಣ, ಅನಾರೋಗ್ಯಪೀಡಿತರು ಮೈಸೂರು, ತಿ.ನರಸೀಪುರ, ತಗಡೂರು… ಹೀಗೆ ಅಕ್ಕಪಕ್ಕದ ಊರುಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅವಲಂಬಿಸುವಂತೆ ಆಗಿದೆ. ಹಾಗಾಗಿ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಸುತ್ತೂರಿನ ಪಿಎಚ್‌ಸಿಗೆ ವೈದ್ಯರು, ಸಹಾಯಕರು, ಸಿಬ್ಬಂದಿಯನ್ನು ನೇಮಕ ಮಾಡಬೇಕು. ಅಲ್ಲದೆ, ಕೇಂದ್ರಕ್ಕೆ ಕಾನೂನಾತ್ಮಕವಾಗಿ ಒದಗಿಸಬೇಕಾದ ಎಲ್ಲಾ ರೀತಿಯ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ದೊರಕಿಸಿಕೊಡಬೇಕು.
-ಆರ್.ಚಂದು, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

3 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

4 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

5 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

11 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

11 hours ago