ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಸೂಕ್ತ ಸಿಬ್ಬಂದಿ ಇಲ್ಲದೆ ಹಣಕಾಸು ವ್ಯವಹಾರ ಮಾಡಲು ತೊಂದರೆಯಾಗುತ್ತಿದೆ. ಹಾಗೆಯೇ ಪಾಸ್ ಬುಕ್ ಎಂಟ್ರಿ ಮಾಡಿಸಲು ಗಂಟೆಗಟ್ಟಲೆ ಸಾಲುಗಟ್ಟಿ ನಿಲ್ಲಬೇಕಾಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಬ್ಯಾಂಕಿನ ವ್ಯವಸ್ಥಾಪಕರು ಕೂಡಲೇ ಅಗತ್ಯವಿರುವ ಸಿಬ್ಬಂದಿಯನ್ನು ನೇಮಿಸುವ ಮೂಲಕ ಬ್ಯಾಂಕಿನ ಗ್ರಾಹಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾ





