ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಈ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ. ತಾಲ್ಲೂಕಿನ ಕೆಲ ಗ್ರಾಮಗಳಿಗೆ ಕಬಿನಿ ನದಿಯಿಂದ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಅನೇಕ ಗ್ರಾಮಗಳನ್ನು ಕಡೆಗಣಿಸಲಾಗಿದೆ.
ಇದರಿಂದಾಗಿ ಈ ಗ್ರಾಮಗಳಲ್ಲಿ ಜನರು ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಸದ್ಯ ಕೂಡ್ಲಾಪುರ ಗ್ರಾಮದಲ್ಲಿ ಜನರು ಮಳೆಯ ನೀರನ್ನು ಆಶ್ರಯಿಸಿಕೊಂಡು ಜೀವನ ಸಾಗಿಸುತ್ತಿದ್ದು, ಕುಡಿಯು ವುದಕ್ಕಾಗಲಿ, ವ್ಯವಸಾಯಕ್ಕಾಗಲಿ ಮಳೆಯ ನೀರನ್ನೇ ನಂಬಿಕೊಂಡಿದ್ದಾರೆ. ಬೇಸಿಗೆಯಲ್ಲಿ ಕೆರೆ-ಕಟ್ಟೆಗಳು ಬತ್ತಿ ಹೋದರಂತೂ ಈ ಭಾಗದಲ್ಲಿ ಹನಿ ನೀರಿಗೂ ಹಾಹಾಕಾರ ಶುರುವಾಗುತ್ತದೆ.
ಆಗ ನೀರಿಗಾಗಿ ಜನರು ಅಕ್ಕಪಕ್ಕದ ಗ್ರಾಮಗಳಿಗೆ ಬಿಂದಿಗೆ ಹಿಡಿದುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ತಾಲ್ಲೂಕಿನ ಅನೇಕ ಗ್ರಾಮಗಳಿಗೆ ಕಬಿನಿ ನದಿಯಿಂದ ಪೈಪ್‌ಲೈನ್ ಅಳವಡಿಸಿ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಕೂಡ್ಲಾಪುರ ಗ್ರಾಮಕ್ಕೆ ಮಾತ್ರ ಇನ್ನೂ ಈ ಭಾಗ್ಯ ಲಭಿಸಿಲ್ಲ. ಈ ಗ್ರಾಮಕ್ಕೆ ನೀರನ್ನು ಪೂರೈಕೆ ಮಾಡಲು ಬೋರ್‌ವೆಲ್‌ಗಳನ್ನು ಕೊರೆದರೂ ನೀರು ಸಿಗುತ್ತಿಲ್ಲ. ಆದ್ದರಿಂದ ಈ ಭಾಗದ ಶಾಸಕರು ಕಬಿನಿ ನದಿಯಿಂದ ಪೈಪ್‌ಲೈನ್ ಅಳವಡಿಸಿ ಕೂಡ್ಲಾಪುರ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. -ಕೆ. ಪಿ. ಬಸವಯ್ಯ, ಕೂಡ್ಲಾಪುರ, ನಂಜನಗೂಡು ತಾ.
ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…
ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…