ಇತ್ತೀಚೆಗೆ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಸ್ಥಳಾವಕಾಶವೇ ಇಲ್ಲದೆ ಸಂಚರಿಸಲು ಪರದಾಡುವಂತಾಗಿದೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಪರಿಣಾಮ ఎల్ల ಬಸ್‌ಗಳಲ್ಲಿಯೂ ಮಹಿಳಾ ಪ್ರಯಾಣಿಕರೇ ತುಂಬಿರುತ್ತಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಸ್ಥಳಾವಕಾಶವೇ ಇಲ್ಲದೆ ಬಾಗಿಲಲ್ಲೇ ಪ್ರಯಾಣಿಸಬೇಕಿದೆ. ನೇತಾಡಿಕೊಂಡು
ಅಲ್ಲದೆ ಕೆಲ ನಿಲ್ದಾಣಗಳಿಗೆ ಬಸ್‌ಗಳು ಬರುವಷ್ಟರಲ್ಲಿಯೇ ಪ್ರಯಾಣಿ ಕರಿಂದ ತುಂಬಿಕೊಂಡಿರುತ್ತವೆ. ಇದರಿಂದಾಗಿ ಕೆಲ ನಿಲ್ದಾಣಗಳಲ್ಲಿ ಬಸ್ ಗಳು ನಿಲುಗಡೆಯನ್ನೇ ನೀಡುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಗೆ ಬಸ್ ಸಿಗದೆ ಅವರು ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಇನ್ನು ಅಶ್ವಮೇಧ ಹಾಗೂ ಕೆಲ ಎಕ್ಸ್‌ಪ್ರೆಸ್ ಬಸ್‌ಗಳು ‘ಸ್ಪೂಡೆಂಟ್ ಪಾಸ್ ನಾಟ್ ಅಲೌಡ್’ ಎಂದು ಬೋರ್ಡ್ ಹಾಕಿಕೊಂಡು ಸಂಚರಿಸುತ್ತಿದ್ದು, ಅವು ಖಾಲಿ ಇದ್ದರೂ ವಿದ್ಯಾರ್ಥಿಗಳಿಗೆ ಉಪಯೋಗವಾಗುತ್ತಿಲ್ಲ.
ಆದ್ದರಿಂದ ಸರ್ಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿಗಳಿಗಾಗಿಯೇ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಿ. ಇಲ್ಲವೇ ಅಶ್ವಮೇಧ ಸೇರಿದಂತೆ ಎಲ್ಲ ಬಸ್‌ಗಳಲ್ಲಿಯೂ ವಿದ್ಯಾರ್ಥಿಗಳ ಪಾಸ್ ಅನುಮತಿಸಲಿ.
-ಎನ್.ಆರ್.ಚೇತನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುವೆಂಪುನಗರ, ಮೈಸೂರು.





