Andolana originals

ಓದುಗರ ಪತ್ರ| ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಿ

ಇತ್ತೀಚೆಗೆ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಸ್ಥಳಾವಕಾಶವೇ ಇಲ್ಲದೆ ಸಂಚರಿಸಲು ಪರದಾಡುವಂತಾಗಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಪರಿಣಾಮ ఎల్ల ಬಸ್‌ಗಳಲ್ಲಿಯೂ ಮಹಿಳಾ ಪ್ರಯಾಣಿಕರೇ ತುಂಬಿರುತ್ತಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಸ್ಥಳಾವಕಾಶವೇ ಇಲ್ಲದೆ ಬಾಗಿಲಲ್ಲೇ ಪ್ರಯಾಣಿಸಬೇಕಿದೆ. ನೇತಾಡಿಕೊಂಡು

ಅಲ್ಲದೆ ಕೆಲ ನಿಲ್ದಾಣಗಳಿಗೆ ಬಸ್‌ಗಳು ಬರುವಷ್ಟರಲ್ಲಿಯೇ ಪ್ರಯಾಣಿ ಕರಿಂದ ತುಂಬಿಕೊಂಡಿರುತ್ತವೆ. ಇದರಿಂದಾಗಿ ಕೆಲ ನಿಲ್ದಾಣಗಳಲ್ಲಿ ಬಸ್ ಗಳು ನಿಲುಗಡೆಯನ್ನೇ ನೀಡುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಗೆ ಬಸ್ ಸಿಗದೆ ಅವರು ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಇನ್ನು ಅಶ್ವಮೇಧ ಹಾಗೂ ಕೆಲ ಎಕ್ಸ್‌ಪ್ರೆಸ್‌ ಬಸ್‌ಗಳು ‘ಸ್ಪೂಡೆಂಟ್ ಪಾಸ್ ನಾಟ್ ಅಲೌಡ್’ ಎಂದು ಬೋರ್ಡ್ ಹಾಕಿಕೊಂಡು ಸಂಚರಿಸುತ್ತಿದ್ದು, ಅವು ಖಾಲಿ ಇದ್ದರೂ ವಿದ್ಯಾರ್ಥಿಗಳಿಗೆ ಉಪಯೋಗವಾಗುತ್ತಿಲ್ಲ.

ಆದ್ದರಿಂದ ಸರ್ಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿಗಳಿಗಾಗಿಯೇ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಿ. ಇಲ್ಲವೇ ಅಶ್ವಮೇಧ ಸೇರಿದಂತೆ ಎಲ್ಲ ಬಸ್‌ಗಳಲ್ಲಿಯೂ ವಿದ್ಯಾರ್ಥಿಗಳ ಪಾಸ್ ಅನುಮತಿಸಲಿ.

-ಎನ್.ಆ‌ರ್.ಚೇತನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

1 hour ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

2 hours ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

2 hours ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

2 hours ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

3 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

4 hours ago