ಮೈಸೂರಿನ ಜೆ.ಪಿ.ನಗರ, ಕುವೆಂಪುನಗರ, ಬೆಮಲ್ ನಗರ, ವಿಜಯನಗರ, ಬಲ್ಲಾಳ್ ವೃತ್ತ, ಸೂರ್ಯ ಬೇಕರಿ ವೃತ್ತ, ಬಸವನಗುಡಿ, ವಿಶ್ವಮಾನವ ಜೋಡಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಸಮಸ್ಯೆ ಕಾಡುತ್ತಿದ್ದು, ವಾಹನ ಸವಾರರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದಾರೆ. ಈ ರಸ್ತೆಗಳಲ್ಲಿ ಬೆಳಿಗ್ಗೆ ಮತ್ತು ಸಂಜೆಯ ವೇಳೆ ವಾಹನ ದಟ್ಟಣೆ ಹೆಚ್ಚಿರುತ್ತದೆ. ಆದರೆ ವಾಹನ ಸವಾರರು ರಸ್ತೆ ಬದಿಗಳಲ್ಲಿ ತಮ್ಮ ವಾಹನಗಳನ್ನು ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡುತ್ತಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿದೆ. ಈ ರಸ್ತೆಗಳಲ್ಲಿ ವಾಣಿಜ್ಯ ಸಂಕೀರ್ಣಗಳು ಹೆಚ್ಚಾಗಿರುವುದರಿಂದ ಜನಸಂದಣಿಯೂ ಹೆಚ್ಚಾಗಿರುತ್ತದೆ. ಇಂತಹ ಸ್ಥಳದಲ್ಲಿ ಟ್ರಾಫಿಕ್ ಸಮಸ್ಯೆಯಾಗುತ್ತಿರುವುದು ಪಾದಚಾರಿಗಳಿಗೆ ಕಿರಿಕಿರಿಯುಂಟು ಮಾಡುತ್ತಿದೆ. ಅಲ್ಲದೆ ಫುಟ್ ಪಾತ್‌ಗಳನ್ನೂ ಕೆಲ ಅಂಗಡಿಯವರು ಆಕ್ರಮಿಸಿಕೊಂಡಿದ್ದು, ಪಾದಾಚಾರಿಗಳು ವಿಧಿಯಿಲ್ಲದೆ ರಸ್ತೆಯಲ್ಲಿಯೇ ಸಂಚರಿಸಬೇಕಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…