Andolana originals

ಓದುಗರ ಪತ್ರ: ಯಥಾ ರಾಜ.. ತಥಾ ಅಧಿಕಾರಿ

‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ ನೀವು ಹೇಗಿರಬೇಕೆಂದು ಗೊತ್ತಿಲ್ಲವೇ…’(ಪತ್ರಿಕಾ ವರದಿ ೨೬.೧೨.೨೫) ಎಂದು ತಹಸಿಲ್ದಾರ್ ಡಿ.ಪಿ.ಶರತ್ ಕುಮಾರ್ ಅವರನ್ನು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜನರ ಕುಂದುಕೊರತೆ ಸಭೆಯಲ್ಲಿ ಹೀನ ಭಾಷೆಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ಉಪ ಲೋಕಾಯುಕ್ತರು ಕರ್ನಾಟಕದಲ್ಲಿ ಶೇ.೬೩ ಭ್ರಷ್ಟಾಚಾರವಿದೆ. ಭ್ರಷ್ಟಾಚಾರದಲ್ಲಿ ರಾಜ್ಯ ೫ನೇ ಸ್ಥಾನದಲ್ಲಿದೆ ಎಂದು ಹೇಳಿದ್ದರು. ಬಿಜೆಪಿ ಸರ್ಕಾರ ಇದ್ದಾಗ ಶೇ.೪೦ ಕಮಿಷನ್ ಎಂದು ಬೊಬ್ಬೆ ಹಾಕಿ, ಅದನ್ನೇ ಮೆಟ್ಟಿಲಾಗಿ ಮಾಡಿಕೊಂಡು ಅಧಿಕಾರಕ್ಕೆ ಬಂದ ಈಗಿನ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಶೇ೬೩ ರಷ್ಟನ್ನೂ ದಾಟಿರುವುದು ಜಗಜ್ಜಾಹೀರು. ವರ್ಗಾವಣೆ ದಂಧೆಯಲ್ಲಿ ಹಿಂದಿನ ಸರ್ಕಾರಗಳ ಅವಧಿಯ ಭ್ರಷ್ಟಾಚಾರವನ್ನೂ ಮೀರಿಸಿರುವುದು ಸುಳ್ಳೇನಲ್ಲ. ೯೦ರ ದಶಕದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕದ ಎಂ.ಬಿ.ಕರಕಣ್ಣನವರ್ ಎಂಬವರು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿದ್ದರು. ಪ್ರಾಮಾಣಿಕರಾದ ಅವರು ನೌಕರ ವರ್ಗದಲ್ಲಿ ಶಿಸ್ತು, ಕರ್ತವ್ಯ ನಿಷ್ಠೆಗೆ ಕಾರಣರಾಗಿದ್ದರು. ಚಾಮರಾಜ ಜೋಡಿ ರಸ್ತೆಯ ಆರೋಗ್ಯ ಕೇಂದ್ರದ ಒಂದು ಕೊಠಡಿಯಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ ಇದನ್ನು ಸಹಿಸದ ಪಟ್ಟಭದ್ರ ಅಧಿಕಾರಿಗಳ ಒಂದು ವರ್ಗ ಒಂದೆರಡು ವರ್ಷಗಳಲ್ಲಿಯೇ ಅವರನ್ನು ಬೆಂಗಳೂರಿಗೆ ಎತ್ತಂಗಡಿ ಮಾಡಿಸಿತು. ಇಂತಹ ವ್ಯವಸ್ಥೆಯಡಿ ಯಾರೋ ಒಬ್ಬ ನೌಕರ, ಅಧಿಕಾರಿಯನ್ನು ದೂಷಿಸಿದರೆ ಪ್ರಯೋಜನವೇನು? ಅದು ಸರ್ಕಾರದ ಮಟ್ಟದಲ್ಲೇ ಆಗಬೇಕು, ಅಂತಹ ಕಾಲಕ್ಕಾಗಿ ಜನ ಎದುರು ನೋಡುತ್ತಿದ್ದಾರೆ.ಯಥಾ ರಾಜ.. ತಥಾ ಅಧಿಕಾರಿ…

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

32 mins ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

1 hour ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

1 hour ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

1 hour ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

5 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

5 hours ago