Andolana originals

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಿಶೇಷಚೇತನರ ಪಿಂಚಣಿ ಸೇರಿದಂತೆ ಎಲ್ಲ ಪ್ರಮಾಣಪತ್ರಗಳಿಗೂ ಅರ್ಜಿ ಸಲ್ಲಿಸಲಾಗುತ್ತದೆ. ಶಾಲಾ ಕಾಲೇಜುಗಳ ದಾಖಲಾತಿ ಸಮಯವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು ಪಡೆಯಲು ಇಲ್ಲಿಗೆ ಆಗಮಿಸುತ್ತಾರೆ. ಆದರೆ ನೆಮ್ಮದಿ ಕೇಂದ್ರದಲ್ಲಿ ಸಾಕಷ್ಟು ಸಿಬ್ಬಂದಿ ಹಾಗೂ ಕಂಪ್ಯೂಟರ್‌ಗಳು ಇಲ್ಲದೇ ಪ್ರಮಾಣ ಪತ್ರಗಳನ್ನು ಸಕಾಲಕ್ಕೆ ನೀಡುವುದು ವಿಳಂಬವಾಗುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರು ನೆಮ್ಮದಿ ಕೇಂದ್ರಗಳಿಗೆ ಅಲೆದಾಡುವಂತಾಗಿದೆ.

ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಽಕಾರಿಗಳು ಕೂಡಲೇ ನೆಮ್ಮದಿ ಕೇಂದ್ರಗಳಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸುವುದರೊಂದಿಗೆ ಅಗತ್ಯವಿರುವಷ್ಟು ಕಂಪ್ಯೂಟರ್‌ಗಳನ್ನು ಒದಗಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

4 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

5 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

5 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

5 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

6 hours ago