Andolana originals

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ ಇಲ್ಲದೇ ಚಿಕಿತ್ಸೆಗೆ ಬರುವರಿಗೆ ತೀವ್ರ ತೊಂದರೆಯಾಗಿದೆ. ಒಬ್ಬರೇ ನರ್ಸ್ ಕರ್ತವ್ಯ ನಿರ್ವಹಿಸುತ್ತಿದ್ದು, ಅವರು ರಜೆ ಹಾಕಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ದೊರೆಯುವುದಿಲ್ಲ.

ಔಷಧಿಗಳು ಲಭ್ಯವಿದ್ದರೂ ರೋಗಿಗಳಿಗೆ ವಿತರಿಸದೇ ಜನೌಷಧಿ ಕೇಂದ್ರದಲ್ಲಿ ಖರೀದಿಸುವಂತೆ ಬರೆದುಕೊಡುತ್ತಾರೆ. ಸಂಬಂಧಪಟ್ಟವರು ಕೂಡಲೇ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ಅಗತ್ಯವಿರುವ ವೈದ್ಯರು, ಶುಶ್ರೂಷಕಿಯರು ಹಾಗೂ ಸಿಬ್ಬಂದಿಯನ್ನು ನೇಮಿಸಬೇಕು ಹಾಗೂ ಚಿಕಿತ್ಸೆ ಪಡೆಯುವವರಿಗೆ ಆರೋಗ್ಯ ಕೇಂದ್ರದಲ್ಲೇ ಔಷಧಿ ವಿತರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

– ಜಿ.ನಾಗೇಂದ್ರ ಶರ್ಮ, ಕುವೆಂಪುನಗರ , ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

5 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

6 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

6 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

6 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

7 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

11 hours ago