ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿರುವ ಚಾಮುಂಡೇಶ್ವರಿ ಆಟೋ ಚಾಲಕರ ಸಂಘದವರು ಅರವಟ್ಟಿಗೆ ಸೌಲಭ್ಯವನ್ನು ಕಲ್ಪಿಸಿದ್ದಾರೆ.
ಇದರಿಂದ ಪಾದಚಾರಿಗಳು, ಬಸ್‌ಗಾಗಿ ಕಾಯುವವರು, ಅದರಲ್ಲೂ ಮುಖ್ಯವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅರವಟ್ಟಿಗೆಯಿಂದ ತುಂಬಾ ಅನುಕೂಲವಾಗುತ್ತಿದೆ.
-ಪ್ರಕಾಶ್ ವಣಗೇರಿ, ಪತ್ರಿಕೋದ್ಯಮ ವಿಭಾಗ ವಿದ್ಯಾರ್ಥಿ, ಮಹಾರಾಜ ಕಾಲೇಜು ಮೈಸೂರು





