ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಅಂಗಡಿ ಬೀದಿಯಲ್ಲಿನ ಆಟೋ ನಿಲ್ದಾಣದ ಸಮೀಪ ಮಳೆ ಬಿತ್ತು ಎಂದರೆ ನೀರು ಸಂಗ್ರಹವಾಗಿ ಕೆಸರುಮಯವಾಗುತ್ತಿದ್ದು, ಸಾರ್ವಜನಿಕರು ಆಟೋ, ಬಸ್ ಹತ್ತಲು ಪರದಾಡುವಂತಾಗಿದೆ. ಮೈಸೂರು-ಮಾನಂದವಾಡಿ ಮುಖ್ಯರಸ್ತೆಯ ಸಮೀಪದಲ್ಲೇ ಇರುವ ಈ ಆಟೋ ನಿಲ್ದಾಣದ ಬಳಿ ಸರ್ಕಾರಿ ಬಸ್‌ಗಳನ್ನೂ ನಿಲುಗಡೆ ಮಾಡುತ್ತಿದ್ದು, ಮಹಿಳೆಯರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಈ ಕೆಸರಿನ ನಡುವೆಯೇ ನಿಂತು ಬಸ್ ಹತ್ತಬೇಕಿದೆ. ಅಲ್ಲದೆ ಬಸ್ ಹತ್ತುವ ಬರದಲ್ಲಿ ಕೆಲ ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ಜಾರಿ ಬಿದ್ದಿರುವ ಉದಾಹರಣೆಗಳೂ ಇವೆ. ಈ ನಿಲ್ದಾಣದ ಸಮೀಪದಲ್ಲಿಯೇ ರಾಜಕಾಲುವೆಯೂ ಇದ್ದು, ಅದು ಕಟ್ಟಿಕೊಂಡಿದೆ. ಇನ್ನು ಇಲ್ಲಿ ಸಂಗ್ರಹವಾಗುತ್ತಿರುವ ಕೆಸರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಪ್ರಯಾಣಿಕರಿಗೆ ಹಾಗೂ ಆಟೋ ಚಾಲಕರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟವರು ಆಟೋ ನಿಲ್ದಾಣದ ಬಳಿ ನೀರು ನಿಲ್ಲದಂತೆ ಮಾಡಬೇಕಿದೆ.
– ಶಂಭು ಶಾಖ್ಯ, ಅಂತರಸಂತೆ, ಎಚ್. ಡಿ. ಕೋಟೆ ತಾ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…