Andolana originals

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮಾರಾಟಗಾರರಿಂದಾಗುವ ವಂಚನೆ ತಪ್ಪಿಸಿ

ಮೈಸೂರು- ಶಿವಮೊಗ್ಗ ಮಾರ್ಗದಲ್ಲಿ ಬೀರೂರು, ತರೀಕೆರೆ, ಅರಸೀಕೆರೆ ಮೊದಲಾದ ರೈಲು ನಿಲ್ದಾಣಗಳಲ್ಲಿ ನೀರು, ಬಿಸ್ಕೆಟ್, ಕುರ್‌ಕುರೆ, ಲೇಸ್, ಚಿಪ್ಸ್ ಮೊದಲಾದ ತಿಂಡಿ ಪ್ಯಾಕೆಟ್‌ಗಳಿಗೆ ದುಪ್ಪಟ್ಟು ಬೆಲೆ ಪಡೆದು ಗ್ರಾಹಕರನ್ನು ವಂಚಿಸಲಾಗುತ್ತಿದೆ. ೫ ರೂ. ಬೆಲೆಯ ಮೂಂಗ್‌ದಾಲ್‌ನ ಚಿಕ್ಕ ಪ್ಯಾಕೆಟ್‌ಗೆ ೧೦ ರೂ. ಪಡೆಯಲಾಗುತ್ತಿದೆ. ೧೫ ರೂ. ಮುಖಬೆಲೆಯ ನೀರಿನ ಬಾಟಲಿಗೂ ೨೦ ರೂ. ಪಡೆಯಲಾಗುತ್ತಿದೆ. ಇದರಿಂದ ದಿನ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳೂ ಹೊರತಾಗಿಲ್ಲ. ೭ ರೂ. ಬೆಲೆಯ ದಿನ ಪತ್ರಿಕೆಗಳನ್ನು ೧೦ ರೂ., ೨೫ ರೂ. ಬೆಲೆಯ ನಿಯತ ಕಾಲಿಕೆಗಳನ್ನು ೩೦ ರೂ.ಗೆ ಮಾರಾಟ ಮಾಡುತ್ತಾರೆ. ಇದನ್ನು ಪ್ರಯಾಣಿಕರು ಪ್ರಶ್ನಿಸಿದರೆ ನಾವು ಮಾರಾಟ ಮಾಡುವುದೇ ಇಷ್ಟು ಹಣಕ್ಕೆ, ಬೇಕಾದರೆ ತೆಗೆದುಕೊಳ್ಳಿ, ಇಲ್ಲದಿದ್ದರೆ ಬಿಡಿ ಎಂದು ಮಾರಾಟಗಾರರು ಉದ್ಧಟತನದಿಂದ ಉತ್ತರಿಸುತ್ತಾರೆ. ರೈಲ್ವೆ ನಿಲ್ದಾಣದಲ್ಲಿ ಹಲವಾರು ವರ್ಷಗಳಿಂದ ಈ ರೀತಿ ವಂಚನೆಯಾಗುತ್ತಿದ್ದರೂ ರೈಲ್ವೆ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಕಂಡೂ ಕಾಣದಂತಿದ್ದಾರೆ. ಇದಕ್ಕೆ ಕಾರಣವೇನು? ಅವರಿಗೂ ಇದರಲ್ಲಿ ಪಾಲು ಸಂದಾಯವಾಗುತ್ತಿದೆಯೇ ಎಂಬ ಅನುಮಾನ ಮೂಡುತ್ತದೆ. ಸಂಬಂಧಪಟ್ಟವರು ಕೂಡಲೇ ಪ್ರಯಾಣಿಕರಿಂದ ಹೆಚ್ಚು ಹಣ ಪಡೆದು ವಂಚಿಸುತ್ತಿರುವ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಪ್ರಯಾಣಿಕರಿಗೆ ಆಗುತ್ತಿರುವ ನಷ್ಟವನ್ನು ತಪ್ಪಿಸಬೇಕಾಗಿದೆ.

– ಮಹತಿ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

8 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

8 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

9 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

9 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

11 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

12 hours ago