ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆಯ ಪ್ರಕರಣಗಳು ಹೆಚ್ಚಾಗು ತ್ತಿದ್ದು, ವಿದ್ಯಾವಂತರೇ ವಂಚಕರ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂ. ಹಣ ವನ್ನು ಕಳೆದುಕೊಳ್ಳುತ್ತಿದ್ದಾರೆ.
ನೀವು ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದೀರಿ, ಅದಕ್ಕಾಗಿ ನಿಮ್ಮನ್ನು ‘ಡಿಜಿಟಲ್ ಅರೆಸ್ಟ್’ ಮಾಡಲಾಗಿದೆ ಎಂದು ಪೊಲೀಸ್ ಅಥವಾ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡುವ ವಂಚಕರು, ಅಮಾಯಕರನ್ನು ತಮ್ಮ ಜಾಲಕ್ಕೆ ಸಿಲುಕಿಸಿ, ಹಂತ ಹಂತವಾಗಿ ಲಕ್ಷಾಂತರ ರೂಪಾಯಿಗಳನ್ನು ಲಪಟಾಯಿಸುವ ಪ್ರಕರಣಗಳು ನಡೆಯುತ್ತಲೇ ಇವೆ. ಇಂತಹ ಸೈಬರ್ ವಂಚಕರನ್ನು ಸೆರೆ ಹಿಡಿಯಲೆಂದೇ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಸೈಬರ್ ಕ್ರೈಂ ಪೊಲೀಸ್ ಠಾಣೆಗಳು ಕರ್ತವ್ಯ ನಿರ್ವಹಿಸುತ್ತಿವೆ. ಸೈಬರ್ ವಂಚನೆಯ ಬಗ್ಗೆ ಪೊಲೀಸ್ ಇಲಾಖೆ, ಭಾರತೀಯ ರಿಸರ್ವ್ ಬ್ಯಾಂಕ್, ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು, ಇನ್ನಿತರ ಸಂಘ ಸಂಸ್ಥೆಗಳು ಸಾಕಷ್ಟು ತಿಳಿವಳಿಕೆ ನೀಡುತ್ತಿದ್ದರೂ ವಂಚನೆ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಾಗಿಲ್ಲ.
ಇನ್ನು ಮುಂದಾದರೂ ನಾಗರಿಕರು ಸೈಬರ್ ವಂಚನೆಯ ಸಣ್ಣ ಸುಳಿವು ಸಿಕ್ಕರೂ, ಎಚ್ಚೆತ್ತುಕೊಂಡು ಸೈಬರ್ ಠಾಣೆ ಅಥವಾ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು. ಬಹುಮುಖ್ಯವಾಗಿ ಅನಾಮಧೇಯ ಕರೆಗಳನ್ನು ಸ್ವೀಕರಿಸುವಾಗ ಬಹಳಷ್ಟು ಎಚ್ಚರಿಕೆ ವಹಿಸಬೇಕು. ವಂಚನೆಯ ಸುಳಿವು ಸಿಕ್ಕರೆ ಕರೆಯನ್ನು ಸ್ಥಗಿತಗೊಳಿಸಿ, ಆ ನಂಬರ್‌ಅನ್ನು ತಕ್ಷಣ ಬ್ಲಾಕ್ ಮಾಡುವ ಮೂಲಕ ವಂಚಕರ ಬಲೆಯಿಂದ ತಪ್ಪಿಸಿಕೊಳ್ಳಬಹುದು.
-ಕೆ.ವಿ.ವಾಸು, ವಿವೇಕಾನಂದನಗರ, ಮೈಸೂರು
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…