Andolana originals

ಓದುಗರ ಪತ್ರ| ಎಚ್‌ಐವಿ ಸೋಂಕಿನ ಬಗ್ಗೆ ಜಾಗೃತಿ ಅಗತ್ಯ

ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 68,450 ಎಚ್‌ಐವಿ ಸೋಂಕಿನ ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಕರ್ನಾಟಕವನ್ನು ಎಚ್‌ಐವಿ ಮುಕ್ತ ರಾಜ್ಯವನ್ನಾಗಿಸಬೇಕು ಎಂದು ಸರ್ಕಾರ ಸೋಂಕಿನ ನಿಯಂತ್ರಣಕ್ಕೆ ಎಷ್ಟೇ ಜಾಗೃತಿ ಮೂಡಿಸಿದರೂ ವರ್ಷದಿಂದ ವರ್ಷಕ್ಕೆ ಎಚ್ ಐವಿ ಪ್ರಕರಣಗಳು ಹೆಚ್ಚಾಗುತ್ತಿವೆ.

1986ರಲ್ಲಿ ದೇಶದಲ್ಲಿ ಮೊದಲ ಎಚ್‌ಐವಿ ಸೋಂಕು ಪತ್ತೆಯಾಗಿತ್ತು. ಅದೇ ಸಂದರ್ಭದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮವಹಿಸಿ ಜನರಲ್ಲಿ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಿದ್ದಲ್ಲಿ ಇಂದು ಇಷ್ಟರ ಮಟ್ಟಿಗೆ ಈ ಸೋಂಕು ಹರಡುತ್ತಿರಲಿಲ್ಲ.

ವಿಶ್ವದ ಎಚ್‌ಐವಿ ಸೋಂಕಿತ ರಾಷ್ಟ್ರಗಳ ಪೈಕಿ ಭಾರತ ಮೂರನೇ ಸ್ಥಾನದಲ್ಲಿದ್ದು, ಕರ್ನಾಟಕದಲ್ಲಿಯೇ 2.28 ಲಕ್ಷ ಮಂದಿ ಸೋಂಕಿತರಿರು ವುದು ಆಘಾತಕರ ಸಂಗತಿ.

ಲೈಂಗಿಕ ಕ್ರಿಯೆ ವೇಳೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿದರೆ ಈ ಸೋಂಕನ್ನು ತಡೆಗಟ್ಟಬಹುದು ಎಂದು ಸರ್ಕಾರ ಎಷ್ಟೇ ಜಾಗೃತಿ ಮೂಡಿಸಿದರೂ, ಎಚ್‌ಐವಿ ಸೋಂಕಿನಿಂದ ಗುಣಮುಖರಾಗಲು ಯಾವುದೇ ಔಷಧ ಲಭ್ಯವಿಲ್ಲ ಎಂದು ಜನರಿಗೆ ಮನದಟ್ಟು ಮಾಡಿಸಿದ್ದರೂ ಜನರು ಎಚ್ಚೆತುಕೊಳ್ಳುತ್ತಿಲ್ಲ. ಇನ್ನು ಮುಂದಾದರೂ ಎಚ್‌ಐವಿ ಸೋಂಕಿನ ಬಗ್ಗೆ ಜಾಗೃತರಾಗಿ ಸೋಂಕಿನ ನಿಯಂತ್ರಣಕ್ಕೆ ಸರ್ಕಾರದ ಮಾರ್ಗ ಸೂಚಿಗಳನ್ನು ಪಾಲಿಸಬೇಕಿದೆ.

-ಹೊ.ನಂ. ಅಂಕರಾಜು, ಮೈಸೂರು.

ಆಂದೋಲನ ಡೆಸ್ಕ್

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago