ಓದುಗರ ಪತ್ರ
ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ ಪದಾರ್ಥಗಳ ವಿತರಣೆಗೆ ಕಪ್ಪು ಬಣ್ಣದ ಪ್ಲಾಸ್ಟಿಕ್ ಡಬ್ಬಿಗಳನ್ನೇ ಬಳಸಲಾಗುತ್ತಿದೆ. ಆದರೆ ಇವುಗಳಲ್ಲಿ ಇ-ತ್ಯಾಜ್ಯದ ವಿಷಕಾರಿ ರಾಸಾಯನಿಕಗಳು ಇರುವುದು ಸಂಶೋಧನೆಗಳಿಂದ ಸಾಬೀತಾಗಿದೆ. ಬಿಸಿ ಆಹಾರವನ್ನು ಇವುಗಳಲ್ಲಿ ಪ್ಯಾಕ್ ಮಾಡಿದಾಗ ಈ ಕ್ಯಾನ್ಸರ್‌ಕಾರಕ ರಾಸಾಯನಿಕಗಳು ಆಹಾರದೊಂದಿಗೆ ದೇಹವನ್ನು ಸೇರಿ ಹಾರ್ಮೋನ್ ಗಳಲ್ಲಿ ಏರುಪೇರು ಮತ್ತು ನರ ದೌರ್ಬಲ್ಯಕ್ಕೆ ಕಾರಣವಾಗುತ್ತವೆ.
ಪರಿಸರದ ದೃಷ್ಟಿಯಿಂದಲೂ ಇವು ಅತ್ಯಂತ ಅಪಾಯಕಾರಿ. ಕಪ್ಪು ಬಣ್ಣವು ಇನ್ರಾರೆಡ್ ಕಿರಣಗಳನ್ನು ಹೀರುವುದರಿಂದ ಶೇ.೯೦ರಷ್ಟು ಕಪ್ಪು ಪ್ಲಾಸ್ಟಿಕ್ ಮರುಬಳಕೆಯಾಗದೆ ಕಸದ ರಾಶಿಯನ್ನು ಸೇರುತ್ತಿದೆ. ಇದಕ್ಕೆ ಪರಿಹಾರವಾಗಿ ಸರ್ಕಾರವು ಆಹಾರ ಪ್ಯಾಕಿಂಗ್‌ನಲ್ಲಿ ಕಪ್ಪು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಽಸಬೇಕು. ಹೋಟೆಲ್‌ಗಳು ಮತ್ತು ಗ್ರಾಹಕರು ಪರಿಸರಸ್ನೇಹಿ ಸ್ಟೀಲ್, ಗಾಜಿನ ಪಾತ್ರೆಗಳು ಅಥವಾ ಎಲೆಗಳನ್ನು ಕಪ್ಪು ಪ್ಲಾಸ್ಟಿಕ್ ಬೌಲ್‌ಗಳಿಗೆ ಪರ್ಯಾಯವಾಗಿ ಬಳಕೆ ಮಾಡುವುದು ಅಗತ್ಯ.
-ಡಾ.ಎಚ್. ಕೆ.ವಿಜಯಕುಮಾರ್, ಬೆಂಗಳೂರು
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…