Mysore
28
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಓದುಗರ ಪತ್ರ: ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿ

ಓದುಗರ ಪತ್ರ

ಡೆನ್ಮಾರ್ಕ್ ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದೆ. ಇತ್ತೀಚಿನ ಸಂಶೋಧನೆಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಬಳಸುವ ಮಕ್ಕಳಲ್ಲಿ ಶೇ.60ಕ್ಕೂ ಹೆಚ್ಚು ಮಕ್ಕಳು ಆತ್ಮವಿಶ್ವಾಸದ ಕೊರತೆ, ಶೇ.40ಕ್ಕಿಂತ ಹೆಚ್ಚು ಮಕ್ಕಳು ನಿದ್ರೆ ವ್ಯತ್ಯಯ, ಮತ್ತು ಶೇ.30ಕ್ಕಿಂತ ಹೆಚ್ಚು ಮಕ್ಕಳು ಹಿಂಸೆಗೆ ಒಳಗಾಗುತ್ತಾರೆ.

ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, ದಿನಕ್ಕೆ ಮೂರು ಗಂಟೆಗಳಿಗಿಂತ ಹೆಚ್ಚುಕಾಲ ಸಾಮಾಜಿಕ ಮಾಧ್ಯಮ ಬಳಕೆ ಮಾಡುವ ಮಕ್ಕಳಲ್ಲಿ ಆತಂಕ ಮತ್ತು ಖಿನ್ನತೆ ಲಕ್ಷಣಗಳು ಎರಡು ಪಟ್ಟು ಹೆಚ್ಚಾಗಿವೆ.

ಭಾರತದಲ್ಲಿಯೂ ಸುಮಾರು ಶೇ.72 ಮಕ್ಕಳು (13-17ವರ್ಷ) ದಿನಕ್ಕೆ ಕನಿಷ್ಠ ಎರಡು ಗಂಟೆಗಳ ಕಾಲ ಸಾಮಾಜಿಕ ಮಾಧ್ಯಮ ಬಳಸುತ್ತಾರೆ ಎಂಬ ವರದಿ ಆತಂಕ ಮೂಡಿಸಿದೆ. ಇದು ಅವರ ಓದು, ನಡತೆ ಮತ್ತು ಮನೋಸ್ವಾಸ್ಥ್ಯಕ್ಕೆ ನೇರ ಹಾನಿ ಉಂಟುಮಾಡುತ್ತಿದೆ. ಆದ್ದರಿಂದ ಭಾರತ ಸರ್ಕಾರವು ಕೂಡ ೧೫ ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸುವ ಅಥವಾ ಕಠಿಣ ನಿಯಂತ್ರಣ ಕ್ರಮಗಳನ್ನು ಹೇರಬೇಕಾಗಿದೆ. ಮಕ್ಕಳ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕಿದೆ.

-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

Tags:
error: Content is protected !!