ಓದುಗರ ಪತ್ರ
ರಾಜ್ಯ ಸರ್ಕಾರವು ಇತ್ತೀಚೆಗೆ ಶಾಲೆಗಳಲ್ಲಿ ಅಡುಗೆಗೆ ಅಲ್ಯುಮಿನಿಯಂ ಪಾತ್ರೆಗಳನ್ನು ಬಳಸದಂತೆ ಆದೇಶ ಹೊರಡಿಸಿರುವುದು ಶ್ಲಾಘನೀಯ. ಅಲ್ಯುಮಿನಿಯಂ ಪಾತ್ರೆಗಳಲ್ಲಿ ದೀರ್ಘಾವಧಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಹಾನಿಕಾರಕ ರಾಸಾಯನಿಕ ಅಂಶಗಳು ಸೇರ್ಪಡೆಗೊಂಡು, ಮೆದುಳಿನ ಬೆಳವಣಿಗೆ, ನರಮಂಡಲದ ಕಾರ್ಯನಿರ್ವಹಣೆ ಹಾಗೂ ದೇಹದ ಪ್ರತಿರೋಧಶಕ್ತಿಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಇಂತಹ ಹಾನಿಕಾರ ಪರಿಣಾಮಗಳಿಂದ ನಮ್ಮ ಶಾಲಾ ಮಕ್ಕಳನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರ ಕೈಗೊಂಡಿರುವ ಈ ಕ್ರಮ ಸ್ವಾಗತಾರ್ಹ.
ಅಡುಗೆಗೆ ಸುರಕ್ಷಿತವಾದ ಸ್ಟೇನ್ ಲೆಸ್ ಸ್ಟೀಲ್ ಅಥವಾ ಕಲಾಯಿ ಮಾಡಿರುವ ತಾಮ್ರದ ಪಾತ್ರೆಗಳನ್ನು ಬಳಸುವುದು ಆರೋಗ್ಯಕರ ಮತ್ತು ದೀರ್ಘಾವಧಿಯ ಪ್ರಯೋಜನಕಾರಿಯಾಗಿದೆ. ಸರ್ಕಾರ ಈ ಬದಲಾವಣೆಗೆ ೨೨ ಕೋಟಿ ರೂ. ಗಳ ಅನುದಾನ ನೀಡಿರುವುದೂ ಪ್ರೋತ್ಸಾಹದಾಯಕ ವಿಚಾರ. ಆದರೆ ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಶಾಲಾ ಅಭಿವೃದ್ಧಿ ಸಮಿತಿಗಳು ಕ್ರಮ ಕೈಗೊಳ್ಳುವುದು ಅಗತ್ಯ.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…