Andolana originals

ಓದುಗರ ಪತ್ರ: ಬಸ್‌ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ ಸ್ವಾಗತಾರ್ಹ

ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು ಜಾಹೀರಾತನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲಿನ ತಂಬಾಕು ಹಾಗೂ ಗುಟ್ಕಾ ಜಾಹೀರಾತಿನಿಂದ ಯುವ ಜನರ ಮೇಲಾಗುತ್ತಿರುವ ದುಷ್ಪರಿಣಾಮದ ಕುರಿತು ‘ಆಂದೋಲನ’ ಪತ್ರಿಕೆಯ ೨೦೨೫ ಡಿಸೆಂಬರ್ ೨೧ರ ಸಂಚಿಕೆಯಲ್ಲಿ ಬಿಎಂಟಿಟಿಸಿ ಜನಹಿತ ಕಾಯಲಿ ಎಂಬ ಶೀರ್ಷಿಕೆಯಡಿಯಲ್ಲಿ ಓದುಗರ ಪತ್ರ ಪ್ರಕಟವಾಗಿತ್ತು. ಸಾರಿಗೆ ನಿಗಮದ ಬಸ್‌ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧಿಸಲು ಆಗ್ರಹಿಸಿ ರಾಜ್ಯಾದ್ಯಂತ ಬಸ್ ಮೇಲೆ ಅಳವಡಿಸಿದ್ದ ಜಾಹೀರಾತನ್ನು ಕಿತ್ತೊಗೆದು ಸಾರ್ವಜನಿಕರು ಪ್ರತಿಭಟನೆಯನ್ನೂ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ರಾಜ್ಯರಸ್ತೆ ಸಾರಿಗೆಯ ನಾಲ್ಕೂ ನಿಗಮಗಳು  ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಗುಟ್ಕಾ ಹಾಗೂ ತಂಬಾಕು ಜಾಹೀರಾತು ನಿಷೇಧಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
– ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

4 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

4 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

4 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

4 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

4 hours ago