ಆಗಸ್ಟ್ 15ರಂದು ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲ ಸಂಘ ಸಂಸ್ಥೆಗಳಲ್ಲಿಯೂ ಸಂಭ್ರಮದಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ.
ರಾಷ್ಟ್ರ ಧ್ವಜವನ್ನು ಪ್ಲಾಸ್ಟಿಕ್ ನಿಂದ ತಯಾರಿಸಬಾರದು ಮತ್ತು ಪ್ಲಾಸ್ಟಿಕ್ ಬಾವುಟ ಗಳನ್ನು ಬಳಸಬಾರದು ಎಂದು ಸರ್ಕಾರಗಳು ಸಾರಿ ಹೇಳುತ್ತಿವೆ.
ರಾಷ್ಟ್ರ ಧ್ವಜಕ್ಕೆ ಗೌರವ ಸೂಚಿಸಬೇಕಾದದ್ದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಆದರೆ ಹಲವರು ಬಟ್ಟೆ ಬಾವುಟಗಳ ಬದಲಾಗಿ ಪ್ಲಾಸ್ಟಿಕ್ ಬಾವುಟಗಳನ್ನು ಬಳಸುತ್ತಿದ್ದಾರೆ. ಈ ಪ್ಲಾಸ್ಟಿಕ್ ಬಾವುಟಗಳು ಸ್ಥಳೀಯ ಅಂಗಡಿಗಳಲ್ಲಿ ದೊರೆಯುವುದರಿಂದ ಅವು ಸುಲಭವಾಗಿ ಮಕ್ಕಳ ಕೈಸೇರುತ್ತವೆ. ಅಲ್ಲದೆ ಮಕ್ಕಳು ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಮುಗಿದ ಬಳಿಕ ಆ ಬಾವುಟಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಾರೆ. ಇದರಿಂದ ರಾಷ್ಟ್ರ ಧ್ವಜಕ್ಕೆ ಅಗೌರವ ಸೂಚಿಸಿದಂತಾಗುತ್ತದೆ. ಇಲ್ಲಿ ಮಕ್ಕಳದ್ದು ತಪ್ಪು ಎಂದು ಹೇಳಲಾಗದು. ಸರ್ಕಾರ ಈ ಈ ಬಗ್ಗೆ ಗಮನಹರಿಸಿ ಪ್ಲಾಸ್ಟಿಕ್ ಬಾವುಟಗಳನ್ನು ತಯಾರಿಸುವವರು ಮತ್ತು ಅದನ್ನು ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಮೂಲಕ ಪ್ಲಾಸ್ಟಿಕ್ ಬಾವುಟಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.





