ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಮೈಸೂರು ಅರಮನೆ ದೇಶ-ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಐತಿಹಾಸಿಕ ಸ್ಥಳವಾಗಿದ್ದು, ಇದರ ವೀಕ್ಷಣೆಗೆ ಮಕ್ಕಳೂ ಸೇರಿದಂತೆ ಸಾವಿರಾರು ಜನರು ಪ್ರತಿನಿತ್ಯ ಆಗಮಿಸುತ್ತಾರೆ.
ಈ ಪ್ರದೇಶದಲ್ಲಿ ಹೀಲಿಯಂ ಗ್ಯಾಸ್ ಬಲೂನ್‌ಗಳ ಅಕ್ರಮ ಮಾರಾಟ ಮತ್ತು ಅಸುರಕ್ಷಿತ ಬಳಕೆ ಇಂತಹ ಅವಘಡಗಳಿಗೆ ಪ್ರಮುಖ ಕಾರಣವಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ತಡೆಗಟ್ಟಲು, ಮೈಸೂರು ಅರಮನೆ ಸುತ್ತಮುತ್ತಲ ಪ್ರದೇಶದಲ್ಲಿ ಹೀಲಿಯಂ ಗ್ಯಾಸ್ ಬಲೂನ್‌ಗಳ ಮಾರಾಟ, ಸಂಗ್ರಹ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು.
ಅದೇ ರೀತಿ, ಸಾರ್ವಜನಿಕ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು, ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಕಾನೂನು ಕ್ರಮ ಜರುಗಿಸಬೇಕಿದೆ.
-ಗೋವಿತ್ ಕಿರಣ್, ರಾಜೇಂದ್ರ ನಗರ, ಮೈಸೂರು




