Andolana originals

ಓದುಗರ ಪತ್ರ:  ಹೀಲಿಯಂ ಗ್ಯಾಸ್ ಬಲೂನ್ ಮಾರಾಟ ನಿಷೇಧಿಸಿ

ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಮೈಸೂರು ಅರಮನೆ ದೇಶ-ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಐತಿಹಾಸಿಕ ಸ್ಥಳವಾಗಿದ್ದು, ಇದರ ವೀಕ್ಷಣೆಗೆ ಮಕ್ಕಳೂ ಸೇರಿದಂತೆ ಸಾವಿರಾರು ಜನರು ಪ್ರತಿನಿತ್ಯ ಆಗಮಿಸುತ್ತಾರೆ.

ಈ ಪ್ರದೇಶದಲ್ಲಿ ಹೀಲಿಯಂ ಗ್ಯಾಸ್ ಬಲೂನ್‌ಗಳ ಅಕ್ರಮ ಮಾರಾಟ ಮತ್ತು ಅಸುರಕ್ಷಿತ ಬಳಕೆ ಇಂತಹ ಅವಘಡಗಳಿಗೆ ಪ್ರಮುಖ ಕಾರಣವಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ತಡೆಗಟ್ಟಲು, ಮೈಸೂರು ಅರಮನೆ ಸುತ್ತಮುತ್ತಲ ಪ್ರದೇಶದಲ್ಲಿ ಹೀಲಿಯಂ ಗ್ಯಾಸ್ ಬಲೂನ್‌ಗಳ ಮಾರಾಟ, ಸಂಗ್ರಹ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು.

ಅದೇ ರೀತಿ, ಸಾರ್ವಜನಿಕ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು, ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಕಾನೂನು ಕ್ರಮ ಜರುಗಿಸಬೇಕಿದೆ.

-ಗೋವಿತ್ ಕಿರಣ್, ರಾಜೇಂದ್ರ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

42 mins ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

2 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

2 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

3 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

4 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

4 hours ago