ಓದುಗರ ಪತ್ರ
ವಿಜಯಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸೌಂಡ್ ಆರ್ಭಟಕ್ಕೆ ೧೭ ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವುದು ಆತಂಕಕಾರಿ ವಿಷಯ. ನಗರ ಪ್ರದೇಶಗಳಲ್ಲಿ ಗಣೇಶ ಹಬ್ಬವನ್ನು ಅತ್ಯಂತ ವೈಭವಯುತವಾಗಿ ಆಚರಿಸಲು ಈಗ ಯುವಕರು ಡಿಜೆ ಅಳವಡಿಸಿ ಭಾರಿ ಸದ್ದಿಗೆ ಕುಣಿಯುವುದನ್ನು ಎಲ್ಲರೂ ಗಮನಿಸಿರುತ್ತಾರೆ.
ಈ ಶಬ್ದದಿಂದಾಗಿ ಹೃದಯ ಸಂಬಂಧಿ ರೋಗಿಗಳು, ಚಿಕ್ಕ ಮಕ್ಕಳು, ವಯೋವೃದ್ದರು ಜೀವ ಕೈಯಲ್ಲಿ ಹಿಡಿದುಕೊಂಡೇ ಬದುಕುವಂತೆ ಆಗಿದೆ. ಮುಂದಾದರೂ ಪ್ರಾಣಕ್ಕೆ ಕುತ್ತು ತರುವ ಡಿಜೆ ಸೌಂಡ್ ಬಳಕೆಗೆ ಸಂಪೂರ್ಣ ನಿಷೇಧ ಹೇರುವ ಅಗತ್ಯವಿದೆ. ಸಂಬಂಧಪಟ್ಟವರು ಈ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಿ, ಹಬ್ಬ, ಉತ್ಸವ ಆಚರಣೆ ಮಾಡುವಾಗ ಜನ ಸಾಮಾನ್ಯರ ಹಿತ ದೃಷ್ಟಿಯಿಂದ ಡಿಜೆ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕಿದೆ.
–ಡಾ.ಎ.ಕೆ. ಜಯವೀರ, ಖೇಮಲಾಪುರ, ರಾಯಬಾಗ ತಾಲ್ಲೂಕು
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…