ಮೈಸೂರು ನಗರದ ಕುವೆಂಪು ನಗರದ ವಿವೇಕಾನಂದ ವೃತ್ತದಿಂದ ಶ್ರೀರಾಂಪುರದ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ತರಕಾರಿ, ಹಣ್ಣು ಮಾರಾಟ ಮಾಡುವ ಕೈಗಾಡಿಯವರು ವ್ಯಾಪಾರ ಮಾಡುತ್ತಿದ್ದಾರೆ.
ವ್ಯಾಪಾರಿಗಳು ರಸ್ತೆಯನ್ನು ಅತಿಕ್ರಮಿಸಿ ವ್ಯಾಪಾರ ಮಾಡುತ್ತಿರುವುದರಿಂದ ಅಪಘಾತ ಸಂಭವಿಸಿ ಜೀವ ಹಾನಿಯಾಗಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮಕೈಗೊಂಡಿಲ್ಲ. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಚಾರ ಪೊಲೀಸರು ರಸ್ತೆಯ ಮೇಲೆ ವ್ಯಾಪಾರ ಮಾಡುವವರವನ್ನು ಕೂಡಲೇ ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು





