Andolana originals

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ ಸಾಲಿನಲ್ಲೇ ೪,೦೮೭ ಕೋಟಿ ರೂ. ದಂಡ ವಸೂಲಿ ಮಾಡಿರುವುದು ವರದಿಯಾಗಿದೆ.

ಮಹಿಳೆಯೊಬ್ಬರ ಉಳಿತಾಯ ಖಾತೆಗೆ ಜಮೆಯಾದ ಮನ್ರೇಗಾದ ಕೂಲಿ ಹಣವಾದ ೫೦೦ ರೂ.ಗಳಲ್ಲಿ ೪೪೦ ರೂ. ಕಡಿತಗೊಳಿಸಿ ದಂಡ ವಸೂಲಿ ಮಾಡಿರುವುದು ಆತಂಕಕಾರಿ ಸಂಗತಿಯಾಗಿದೆ. ಬಡ ಜನರ ದಿನದ ದುಡಿಮೆಯ ಹಣವನ್ನು ದಂಡದ ರೂಪದಲ್ಲಿ ಪಡೆದರೆ ಜೀವನ ನಿರ್ವ ಹಣೆ ಹೇಗೆ ಮಾಡುವುದು ಎಂಬ ಪ್ರಶ್ನೆ ಕಾಡುತ್ತದೆ.

ಉಳಿತಾಯ ಖಾತೆಯಲ್ಲಿರುವ ಹಣಕ್ಕೆ ಈ ಮೊದಲು ಶೇ.೪ ಬಡ್ಡಿ ನೀಡುತ್ತಿದ್ದ ಬ್ಯಾಂಕ್‌ಗಳು ಈಗ ಬಡ್ಡಿಯ ಮೊತ್ತವನ್ನು ಶೇ. ೨.೫ ಬಡ್ಡಿ ನೀಡುತ್ತಿವೆ. ಪರಿಸ್ಥಿತಿ ಹೀಗಿದ್ದರೂ ಆರ್‌ಬಿಐ ಗ್ರಾಕರಿಗೆ ದಂಡ ವಿಧಿಸುತ್ತಿರುವ ಬ್ಯಾಂಕ್‌ಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನ ಗ್ರಾಹಕರೊಬ್ಬರು ನೀಡಿದ ದೂರನ್ನು ಅಧರಿಸಿ ಲೋಕಸಭೆಯ ಅರ್ಜಿಗಳ ಸಮಿತಿಯು ಕನಿಷ್ಠ ಮೊತ್ತ ಇಲ್ಲವೆಂಬ ಕಾರಣಕ್ಕೆ ಬ್ಯಾಂಕ್‌ಗಳು ದಂಡ ವಿಧಿಸದಂತೆ ಶಿಫಾರಸು ಮಾಡಿದ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದೆ. ಸ್ಥಿರ ಠೇವಣಿಗಳ ಮೇಲೆ ಹೆಚ್ಚಿನ ಬಡ್ಡಿ ದರ ನೀಡಬೇಕು ಎಂದೂ ಅದು ಹೇಳಿದೆ.

ಗ್ರಾಹಕರ ಠೇವಣಿಯ ಹಣದಿಂದಲೇ ಸಾವಿರಾರು ಕೋಟಿ ರೂ. ವ್ಯವಹಾರ ನಡೆಸಿ ಲಾಭಗಳಿಸುವ ಬ್ಯಾಂಕ್‌ಗಳು ಉಳಿತಾಯ ಖಾತೆದಾರರು ಬ್ಯಾಂಕಿನಲ್ಲಿಟ್ಟಿರುವ ಹಣಕ್ಕೆ ಹೆಚ್ಚು ಬಡ್ಡಿ ನೀಡಬೇಕು ಹಾಗೂ ಕನಿಷ್ಠ ಮೊತ್ತ ಕಾಯ್ದುಕೊಳ್ಳದ ಗ್ರಾಹಕರಿಗೆ ದಂಡವಿಧಿಸಬಾರದು ಎಂದು ಆರ್‌ಬಿಐ ಆದೇಶ ಹೊರಡಿಸುವ ಮೂಲಕ ಗ್ರಾಹಕರ ಹಿತ ಕಾಪಾಡ ಬೇಕಾಗಿದೆ.

-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

16 mins ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

18 mins ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

20 mins ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

26 mins ago

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

1 hour ago

ನಿರುದ್ಯೋಗಿಗಳ ಬದುಕಿನ ಬೆಳ್ಳಿ ರೇಖೆ ಯುವನಿಧಿ

ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಉದ್ದೇಶವು ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವುದಾಗಿದೆ. ಪದವೀಧರರಿಗೆ ಮಾಸಿಕ ೩,೦೦೦…

1 hour ago