Andolana originals

ಓದುಗರ ಪತ್ರ: ಗಣಪತಿ ವಿಸರ್ಜನೆ ವೇಳೆ ಎಚ್ಚರಿಕೆ ಇರಲಿ

ಗಣೇಶ ಹಬ್ಬದ ನಿಮಿತ್ತ ಬೀದಿ ಬೀದಿಗಳಲ್ಲಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಸಂಭ್ರಮಾಚರಣೆ ಮಾಡಲಾಗುತ್ತದೆ. ಆದರೆ ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ಅವಘಡಗಳಿಂದ ಹಾಗೂ ಕಾಲು ಜಾರಿ  ನದಿಗೆ ಬಿದ್ದು ಪ್ರತಿವರ್ಷ ಅನೇಕರು ಸಾವಿಗೀಡಾಗುತ್ತಿದ್ದಾರೆ. ಹೀಗಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.

ಗಣೇಶ ಮೂರ್ತಿ ವಿಸರ್ಜನೆ ವೇಳೆ ಈಜು ಬರುವವರು ಮಾತ್ರ ನೀರಿಗಿಳಿಯ ಬೇಕು. ಈಜು ಬಾರದವರು ನೀರಿಗಿಳಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಗಣೇಶ ಮೂರ್ತಿ ವಿಸರ್ಜನೆ ನಡೆಯುವ ಕೆರೆ, ಬಾವಿ ಮೊದಲಾದ ಸ್ಥಳಗಳಲ್ಲಿ ಈಜು ತಜ್ಞರನ್ನು ನಿಯೋಜಿಸವುದು ಅಗತ್ಯ. ಮೆರವಣಿಗೆ ಸಂದರ್ಭದಲ್ಲಿ ಪಟಾಕಿಗಳನ್ನು ಹಚ್ಚಿ ಸಂಭ್ರಮಿಸಲಾಗುತ್ತದೆ. ಈ ಸಂದರ್ಭದಲ್ಲಿ ಪಟಾಕಿ ಬಾಕ್ಸ್‌ಗಳನ್ನು ಸಂಗ್ರಹಿಸುವಾಗ ವಿದ್ಯುತ್ ಸಂಪರ್ಕವಾಗಲಿ, ಬೆಂಕಿಯ ಕಿಡಿಯಾಗಲಿ ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ. ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವಾಗ ಮಹಾನಗರ ಪಾಲಿಕೆಯವರು ಷರತ್ತುಗಳನ್ನು ವಿಧಿಸುವಂತೆ ಗಣೇಶ ಮೂರ್ತಿಗಳ ವಿಸರ್ಜನೆಯ ಸಂದರ್ಭದಲ್ಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ಸಂದರ್ಭದಲ್ಲಿ ನಿಗಾವಹಿಸಲು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಅನಾಹುತಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.

– ಎಂ.ಎಸ್.ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಕಾರ್ಯಕ್ರಮಗಳಲ್ಲಿ ಜನರ ಸುರಕ್ಷತೆ: ಹೊಸ ಸುತ್ತೋಲೆ

ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…

27 mins ago

ಲಕ್ಕುಂಡಿ ಬೆನ್ನಲ್ಲೇ ಯಾದಗಿರಿಯಲ್ಲೂ ಉತ್ಖನನ ನಡೆಸಲು ಸಿದ್ಧತೆ

ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…

45 mins ago

ಸಂಸದ ಯದುವೀರ್‌ ಒಡೆಯರ್‌ ಭೇಟಿಯಾದ ಪ್ರತಾಪ್‌ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸಂಸದ ಯದುವೀರ್‌ ಒಡೆಯರ್‌ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…

1 hour ago

ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ “ಲ್ಯಾಂಡ್ ಲಾರ್ಡ್” ಸಿನಿಮಾ ನೋಡಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…

2 hours ago

ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತ: ಜನಜೀವನ ಅಸ್ತವ್ಯಸ್ತ

ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…

2 hours ago

ಪಾಕಿಸ್ತಾನ ಮದುವೆ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: ಐವರು ಸಾವು

ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…

2 hours ago