ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ ಗುತ್ತಿಗೆ ಪಡೆದವರು ಮುಖ್ಯ ರಸ್ತೆಗಳಲ್ಲಿ ಭಾರೀ ಗುಂಡಿಗಳನ್ನು ತೆಗೆದು ಪೈಪ್‌ಗಳನ್ನು ರಸ್ತೆಯಲ್ಲಿ ಹಾಕಿದ್ದು, ಗುಂಡಿಗಳನ್ನು ಮುಚ್ಚದೇ ಹಾಗೇ ಬಿಟ್ಟಿದ್ದಾರೆ. ಕುವೆಂಪು ನಗರದ ಎನ್ -ಬ್ಲಾಕ್‌ನ ಮುಖ್ಯ ರಸ್ತೆಯಲ್ಲಿರುವ ಹೋರಿ ಸುಬ್ಬೇಗೌಡ ಸ್ಮಾರಕ ಬಸ್ ನಿಲ್ದಾಣದ ಪಕ್ಕದಲ್ಲಿ ಎರಡು ತಿಂಗಳ ಹಿಂದಿನಿಂದಲೂ ಸೆಸ್ಕ್ ಭೂಗತ ಕೇಬಲ್ ಅಳವಡಿಕೆಗಾಗಿ ಪೈಪ್‌ಗಳನ್ನು ರಸ್ತೆಯ ಬದಿಯಲ್ಲಿ ಹಾಗೆಯೇ ಬಿಟ್ಟಿದ್ದು, ರಾತ್ರಿ ವೇಳೆ ಓಡಾಡುವ ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆಯಾಗಿದೆ. ಯುಜಿ ಕೇಬಲ್ ಅಳವಡಿಕೆಗೆ ತೆಗೆದಿರುವ ಗುಂಡಿಗಳ ಅಕ್ಕಪಕ್ಕದಲ್ಲಿ ಕೆಂಪು ಬಣ್ಣದ ಟೇಪ್‌ಗಳನ್ನು ಹಾಕುವುದು ಅಗತ್ಯ. ಇಲ್ಲದಿದ್ದರೆ ಅಪಘಾತ ಸಂಭವಿಸಿ ಜೀವಹಾನಿಯಾದರೆ ಅದಕ್ಕೆ ಸೆಸ್ಕ್ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…
ಸಿ.ಎಂ.ನರಸಿಂಹಮೂರ್ತಿ ಕೈಲಾಸಮೂರ್ತಿ ಗುಂಡು ಗುಂಡಾಗಿ, ಚೆಂದುಳ್ಳ ಚೆಲುವನಂತೆ ಕೆಂಪು ಕೆಂಪಾಗಿದ್ದವ. ಕೇವಲ ೩೮ ವರ್ಷ ವಯಸ್ಸು.ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕುಸಿದ್ದಯ್ಯನಪುರ…