Andolana originals

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ ಗುತ್ತಿಗೆ ಪಡೆದವರು ಮುಖ್ಯ ರಸ್ತೆಗಳಲ್ಲಿ ಭಾರೀ ಗುಂಡಿಗಳನ್ನು ತೆಗೆದು ಪೈಪ್‌ಗಳನ್ನು ರಸ್ತೆಯಲ್ಲಿ ಹಾಕಿದ್ದು, ಗುಂಡಿಗಳನ್ನು ಮುಚ್ಚದೇ ಹಾಗೇ ಬಿಟ್ಟಿದ್ದಾರೆ. ಕುವೆಂಪು ನಗರದ ಎನ್ -ಬ್ಲಾಕ್‌ನ ಮುಖ್ಯ ರಸ್ತೆಯಲ್ಲಿರುವ ಹೋರಿ ಸುಬ್ಬೇಗೌಡ ಸ್ಮಾರಕ ಬಸ್ ನಿಲ್ದಾಣದ ಪಕ್ಕದಲ್ಲಿ ಎರಡು ತಿಂಗಳ ಹಿಂದಿನಿಂದಲೂ ಸೆಸ್ಕ್ ಭೂಗತ ಕೇಬಲ್ ಅಳವಡಿಕೆಗಾಗಿ ಪೈಪ್‌ಗಳನ್ನು ರಸ್ತೆಯ ಬದಿಯಲ್ಲಿ ಹಾಗೆಯೇ ಬಿಟ್ಟಿದ್ದು, ರಾತ್ರಿ ವೇಳೆ ಓಡಾಡುವ ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆಯಾಗಿದೆ. ಯುಜಿ ಕೇಬಲ್ ಅಳವಡಿಕೆಗೆ ತೆಗೆದಿರುವ ಗುಂಡಿಗಳ ಅಕ್ಕಪಕ್ಕದಲ್ಲಿ ಕೆಂಪು ಬಣ್ಣದ ಟೇಪ್‌ಗಳನ್ನು ಹಾಕುವುದು ಅಗತ್ಯ. ಇಲ್ಲದಿದ್ದರೆ ಅಪಘಾತ ಸಂಭವಿಸಿ ಜೀವಹಾನಿಯಾದರೆ ಅದಕ್ಕೆ ಸೆಸ್ಕ್ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

53 mins ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

54 mins ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

56 mins ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

59 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

1 hour ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

1 hour ago