Mysore
22
haze

Social Media

ಭಾನುವಾರ, 25 ಜನವರಿ 2026
Light
Dark

ಓದುಗರ ಪತ್ರ: ಜಾತಿ ಸಮೀಕೆಗೆ ಖಾಸಗಿ ವ್ಯಕ್ತಿಗಳುಬಂದರೆ ಎಚ್ಚರವಿರಲಿ

ಓದುಗರ ಪತ್ರ

ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯದ ಅಪ್ಲಿಕೇಷನ್ ಈಗ ಕೆಲವು ಕಡೆ ಖಾಸಗಿ ವ್ಯಕ್ತಿಗಳ ಕೈ ಸೇರಿದೆ. ಸರ್ಕಾರಿ ಸಿಬ್ಬಂದಿ ತಮ್ಮ ಮೊಬೈಲ್‌ಅನ್ನು ಬದಲಿ ವ್ಯಕ್ತಿಗಳಿಗೆ ನೀಡಿ ಸರ್ವೆಗೆ ಕಳುಹಿಸುತ್ತಿದ್ದಾರೆ. ಸರ್ವೆ ಕಾರ್ಯಕ್ಕೆ ಸರ್ಕಾರಿ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ ಯವರು ಬರುತ್ತಿರುವುದು ಜನರಲ್ಲಿ ಸಂದೇಹ ಮೂಡಿಸುತ್ತಿದೆ

ವೈಯಕ್ತಿಕ ಮಾಹಿತಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿಯೂ ಈ ರೀತಿ ಬೇರೆ ವ್ಯಕ್ತಿಗಳು ಮಾಹಿತಿ ಪಡೆಯುವಂತಿಲ್ಲ. ಸರ್ಕಾರದ ನಿಯಮಾವಳಿಗಳ ಪ್ರಕಾರ ಸಮೀಕ್ಷೆ ಕಾರ್ಯಕ್ಕೆ ನಿಯೋಜಿತರಾದ ಸಿಬ್ಬಂದಿಯೇ ಗಣತಿ ಮಾಡಬೇಕು. ಹಾಗೊಮ್ಮೆ ಬೇರೆಯವರಿಗೆ ಮಾಹಿತಿ ಸಿಕ್ಕರೆ ಅದು ದುರ್ಬಳಕೆಯಾಗುವ ಸಾಧ್ಯತೆಯೂ ಉಂಟು. ಈ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳು,ಸರ್ವೆ ಮಾಡುವವರ ಪ್ರತಿದಿನದ ಮಾಹಿತಿ ಪಡೆದು, ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು.

ಇದನ್ನೂ ಓದಿ:-ಓದುಗರ ಪತ್ರ: ಗೋಲ್ಡ್ ಪಾಸ್ ಕೊಂಡವರಿಗೆ ಹಣ ಹಿಂದಿರುಗಿಸಿ

ಜನರು ಏನು ಮಾಡಬೇಕು?: ಗಣತಿಗೆ ಬರುವ ವ್ಯಕ್ತಿಯ ಗುರುತಿನ ಚೀಟಿ ಪರಿಶೀಲಿಸಿ. ಆತ ಸರ್ಕಾರಿ ಸಿಬ್ಬಂದಿಯೇ ಎಂಬುದನ್ನುಖಚಿತಪಡಿಸಿಕೊಳ್ಳಿ. ಮೊಬೈಲ್‌ನಲ್ಲಿ ಸರ್ವೆ ಆಪ್ ಆತನ ಹೆಸರಿನ ಐ.ಡಿ. ಹೌದೋ ಅಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಿ. ಬ್ಯಾಂಕ್ ಅಕೌಂಟ್ ನಂಬರ್ ಆಗಲಿ, ಯಾವುದೇ ಬ್ಯಾಂಕ್ ಅಕೌಂಟ್‌ನ ಒಟಿಪಿಯಾಗಲಿ ಕೊಡಬಾರದು.

– ಗೋವಿತ್ ಕಿರಣ್, ರಾಜೇಂದ್ರ ನಗರ, ಮೈಸೂರು

Tags:
error: Content is protected !!