Mysore
24
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಓದುಗರ ಪತ್ರ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು ವರದಿಯಾಗಿರುವುದು ವೈರಸ್ ವ್ಯಾಪಕತೆಯನ್ನು ತೋರಿಸುತ್ತದೆ. ರೋಗಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಸಮಯದಲ್ಲಿ ಮಾಹಿತಿ ನೀಡದೆ ಜಗೃತಿ ಮೂಡಿಸುವಲ್ಲಿ ವಿಳಂಬ ಮಾಡಿರುವುದು ಸರಿಯಲ್ಲ. ಸರ್ಕಾರವು ಉಚಿತ ತಪಾಸಣೆ, ಔಷಧಿ ಪೂರೈಕೆ, ಮಾಸ್ಕ್ ಧಾರಣೆ ಕಡ್ಡಾಯಗೊಳಿಸಬೇಕು.

ಸಾರ್ವಜನಿಕ ಸಾರಿಗೆಯಲ್ಲಿ ಸ್ಯಾನಿಟೈಸರ್ಡ್ರೈವ್ ಮತ್ತು ಶಾಲೆಗಳಲ್ಲಿ ಜಗೃತಿ ಮೂಡಿಸಿ, ವೈರಸ್ ತಡೆಯಲು ಹೊಸ ತಂತ್ರeನವನ್ನು ಬಳಸಿಕೊಳ್ಳಬೇಕು. ಮೊಬೈಲ್ ಕ್ಲಿನಿಕ್ ಹಾಗೂ ಬೂಸ್ಟರ್ ಲಸಿಕಾ ಶಿಬಿರಗಳನ್ನು ಆಯೋಜಿಸುವುದರಿಂದ ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯ.

-ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು

Tags:
error: Content is protected !!