Mysore
21
light rain

Social Media

ಮಂಗಳವಾರ, 12 ನವೆಂಬರ್ 2024
Light
Dark

ಓದುಗರ ಪತ್ರ: ಸಾಹಿತ್ಯ ಕ್ಷೇತ್ರದವರೆ ಅಧ್ಯಕ್ಷರಾಗಲಿ

ಮಂಡ್ಯದಲ್ಲಿ ನಡೆಯಲಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತ್ಯ ಕ್ಷೇತ್ರದ ಹೊರತಾಗಿ ಬೇರೆ ಕ್ಷೇತ್ರಗಳ ಸಾಧಕರನ್ನು ಆಯ್ಕೆ ಮಾಡಬೇಕು ಎಂಬ ಚರ್ಚೆ ನಡೆಯುತ್ತಿದ್ದು, ಈ ವಿವಾದದ ಬಗ್ಗೆ ‘ಅಂದೋಲನ ದಿನಪತ್ರಿಕೆಯ ಅ.17ರ ಸಂಚಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ಪತ್ರವೊಂದು ಪ್ರಕಟವಾಗಿತ್ತು.

ಸಮ್ಮೇಳನಾಧ್ಯಕ್ಷರ ಆಯ್ಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿರುವುದು ವಿಷಾದನೀಯ. ಬೇರೆ ಕ್ಷೇತ್ರಗಳ ಸಾಧಕರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡುವುದಾದರೆ ಆ ಪಟ್ಟಕ್ಕಾಗಿ ಪೈಪೋಟಿ ಹೆಚ್ಚಾಗಬಹುದು. ಪ್ರಭಾವಿಗಳು ತಮ್ಮ ರಾಜಕೀಯ ಪ್ರಭಾವ ಬಳಸಿ ಸಮ್ಮೇಳನಾಧ್ಯಕ್ಷರಾಗಬಹುದು. ಆದ್ದರಿಂದ ಸಾಹಿತ್ಯೇತರ ಕ್ಷೇತ್ರದವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡುವುದು ಸಮಂಜಸವಲ್ಲ. ಇವರಿಗೆ ಬೇರೆ ಬೇರೆ ವೇದಿಕೆಗಳಿವೆ. ಹಾಗಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನೇ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡುವುದು ಒಳಿತು.

-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು.

 

Tags: