Andolana originals

ಓದುಗರ ಪತ್ರ: ಬೈಕ್ ಟ್ಯಾಕ್ಸಿ ಚಾಲಕರು ನಿಯಮ ಪಾಲಿಸಲಿ

ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ ಬೈಕ್ ಟ್ಯಾಕ್ಸಿಯನ್ನೇ ಅವಲಂಬಿಸಿದ್ದಾರೆ. ಕೆಲವೊಮ್ಮೆ ಬೈಕ್‌ ಟ್ಯಾಕ್ಸಿಯವರು ಬುಕ್ಕಿಂಗ್ ಆದ ೨೦ ನಿಮಿಷಗಳ ನಂತರ ಬುಕ್ಕಿಂಗ್ ಅನ್ನು ರದ್ದು ಮಾಡುವುದರಿಂದ ರೈಲು ಹಾಗೂ ಬಸ್ಸಿನ ಮೂಲಕ ಊರುಗಳಿಗೆ ತೆರಳುವವರಿಗೆ ಸಕಾಲಕ್ಕೆ ತಲುಪಲು ತೊಂದರೆಯಾಗುತ್ತಿದೆ.

ಒಬ್ಬರು ಪ್ರಯಾಣಿಕನನ್ನು ಕರೆದುಕೊಂಡು ಹೋಗುವಾಗಲೇ ಮತ್ತೊಂದು ಬುಕ್ಕಿಂಗ್ ಮಾಡಿಕೊಂಡು ನಿಗದಿತ ಸಮಯಕ್ಕೆ ತಲುಪುವ ಧಾವಂತದಲ್ಲಿ ಮಿತಿ ಮೀರಿದ ವೇಗದಲ್ಲಿ ಹೋಗುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿರುತ್ತದೆ. ಸಂಬಂಧಪಟ್ಟವರು ಕೂಡಲೇ ನಿಯಮವನ್ನು ಪಾಲಿಸಲು ಬೈಕ್ ಟ್ಯಾಕ್ಸಿ ಚಾಲಕರಿಗೆ ಸೂಚಿಸುವುದರ ಮೂಲಕ ಪ್ರಯಾಣಿಕರ ಹಿತ ಕಾಪಾಡಬೇಕಾಗಿದೆ.

– ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಸೈಕಲ್ ನಂಜುಂಡಸ್ವಾಮಿಯ ಪಂಕ್ಚರ್ ಶಾಪ್ ಖಾಲಿ ಖಾಲಿ

ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…

4 mins ago

ಶಾಂತಿದೂತನ ನಾಡಿನಲ್ಲಿ ದ್ವೇಷದ ಕೆನ್ನಾಲಿಗೆ

ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…

12 mins ago

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

18 mins ago

ನಾಳೆ ಅರಮನೆಗೆ ಅಭಿಮನ್ಯು ಪ್ರವೇಶ

ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…

24 mins ago

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

14 hours ago