Andolana originals

ಓದುಗರ ಪತ್ರ: ಪೈಪೋಟಿಯ ಮೇಲೆ ಗ್ಯಾರಂಟಿ ಯೋಜನೆಗಳ ಘೋಷಣೆ!

ಹರಿಯಾಣ ವಿಧಾನಸಭಾ ಚುನಾವಣೆಯ ಸಲುವಾಗಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳಂತೆಯೇ ಉಚಿತ ವಿದ್ಯುತ್, ಮಹಿಳೆಯರಿಗೆ ಪ್ರತಿ ತಿಂಗಳು ೨ ಸಾವಿರ ರೂ. , ಗ್ಯಾಸ್ ಸಿಲಿಂಡರ್‌ಗಳ ದರ ೫೦೦ ರೂ. ಗಳಿಗೆ ಇಳಿಕೆ, ವೃದ್ಧರಿಗೆ ಮಾಸಿಕ ೬,೦೦೦ ರೂ. ಪಿಂಚಣಿ ನೀಡುವುದಾಗಿ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಬಿಜೆಪಿಯೂ ಮಹಿಳೆಯರಿಗೆ ಮಾಸಿಕ ೨,೧೦೦ ರೂ. ಹಾಗೂ ಗ್ಯಾಸ್ ಸಿಲಿಂಡರ್ ದರವನ್ನು ೫೦೦ ರೂ. ಗಳಿಗೆ ಇಳಿಸುವುದಾಗಿ ಭರವಸೆ ನೀಡಿದೆ.

ಕರ್ನಾಟಕದ ವಿಧಾನಸಭಾ ಚುನಾವಣೆ ವೇಳೆ ಪ್ರಚಾರಕ್ಕೆಂದು ಬಂದಿದ್ದ ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿದ್ದರು. ಆದರೆ ಈಗ ಕಾಂಗ್ರೆಸ್ ಮಾದರಿಯಲ್ಲಿಯೇ ಬಿಜೆಪಿಯೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದ್ದು, ಈ ಯೋಜನೆಗಳನ್ನು ಮೋದಿ ಹೊಗಳಿಕೊಂಡಿದ್ದಾರೆ. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿದ್ದ ಬಿಜೆಪಿ ಈಗ ಚುನಾವಣೆಯನ್ನು ಗೆಲ್ಲಲು ಅನಿವಾರ್ಯವಾಗಿ ತಾನೂ ಗ್ಯಾರಂಟಿ ಯೋಜನೆಗಳ ಮೊರೆ ಹೋಗಿದೆ. ಯಾವುದೇ ರಾಜಕೀಯ ಪಕ್ಷವಾದರೂ ತಾನು ಅಽಕಾರಕ್ಕೆ ಬರುವ ಉದ್ದೇಶ ಹೊಂದಿರುತ್ತದೆಯೇ ವಿನಾ ಸೇವೆಯನ್ನಲ್ಲ ಎಂಬುದು ರಾಜಕೀಯ ಪಕ್ಷಗಳು ಪೈಪೋಟಿಗೆ ಬಿದ್ದಂತೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿರುವುದನ್ನು ನೋಡಿದರೆ ತಿಳಿಯುತ್ತದೆ. ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸುವ ಸಲುವಾಗಿ ಸರ್ಕಾರಗಳು ಆಸ್ತಿ ತೆರಿಗೆ, ನೋಂದಣಿ ಶುಲ್ಕ, ಅಬಕಾರಿ ತೆರಿಗೆ, ವಾಣಿಜ್ಯ ತೆರಿಗೆಗಳನ್ನು ಹೆಚ್ಚಿಸುವ ಮೂಲಕ ತಮ್ಮ ಮೇಲಿನ ಹೊರೆಯನ್ನು ಜನರ ಮೇಲೆ ಹೊರಿಸುತ್ತವೆ. ರಾಜಕೀಯ ಪಕ್ಷಗಳ ಈ ನಡವಳಿಕೆಯನ್ನು ನೋಡಿದಾಗ ‘ಉಪದೇಶ ಹೇಳೋಕೆ, ಬದನೆಕಾಯಿ ತಿನ್ನೋಕೆ’ ಎಂಬ ನಾಣ್ಣುಡಿ ನೆನಪಾಗುತ್ತದೆ.

-ಮುಳ್ಳೂರು ಪ್ರಕಾಶ್, ದಟ್ಟಗಳ್ಳಿ, ಮೈಸೂರು

 

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago