Mysore
27
scattered clouds

Social Media

ಮಂಗಳವಾರ, 24 ನವೆಂಬರ್ 2026
Light
Dark

ಓದುಗರ ಪತ್ರ: ಬಾಟಲಿ ನೀರು: ಬಳಕೆ ಮುನ್ನ ಎಚ್ಚರ ಇರಲಿ

ಇಂದಿನ ಜೀವನಶೈಲಿಯಲ್ಲಿ ಬಾಟಲಿ ನೀರಿನ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರಯಾಣದ ಸಮಯದಲ್ಲಿ, ಶಾಲಾ-ಕಾಲೇಜುಗಳಲ್ಲಿ, ಕಚೇರಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜನರು ಬಾಟಲಿ ನೀರನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ.

ಆದರೆ ಬಿಸಿಲಿನಲ್ಲಿ ಹೆಚ್ಚು ಸಮಯ ಇಟ್ಟಿರುವ ಪ್ಲಾಸ್ಟಿಕ್ ಬಾಟಲಿಗಳಲ್ಲಿನ ನೀರು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂಬ ಆತಂಕವೂ ಇದೆ. ಹೆಚ್ಚಿನ ತಾಪ ಮಾನಕ್ಕೆ ಪ್ಲಾಸ್ಟಿಕ್ ಬಾಟಲಿಗಳು ಒಳಗಾದಾಗ ಅವುಗಳಿಂದ ಕೆಲವು ರಾಸಾಯನಿಕಗಳು ನೀರಿಗೆ ಸೇರುವ ಸಾಧ್ಯತೆ ಇದೆ ಎಂದು ಅಧ್ಯಯನಗಳು ಸೂಚಿಸಿವೆ. ಇಂತಹ ನೀರನ್ನು ದೀರ್ಘಕಾಲ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯನ್ನು ನಿರ್ಲಕ್ಷಿಸುವಂತಿಲ್ಲ. ಬಿಸಿಲಿನಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಇಡುವುದನ್ನು ತಪ್ಪಿಸಬೇಕು. ಸಾಧ್ಯವಾ ದಷ್ಟು ಉಕ್ಕಿನ ಅಥವಾ ಗಾಜಿನ ಬಾಟಲಿಗಳನ್ನು ಬಳಸಬೇಕು. ಕುಡಿಯುವ ನೀರಿನ ಗುಣಮಟ್ಟವನ್ನು ಕಾಪಾಡಲು ಸಂಬಂಧಪಟ್ಟ ಇಲಾಖೆಗಳು ನಿಯಮಿತವಾಗಿ ಪರಿಶೀಲನೆ ನಡೆಸಬೇಕು. ಕಳಪೆ ನೀರನ್ನು ಬಾಟಲಿಗಳಲ್ಲಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಏಕೆಂದರೆ ನೀರು ಮಾನವನ ಬದುಕಿನ ಅಮೂಲ್ಯ ಸಂಪತ್ತು. ಅದು ಆರೋಗ್ಯವನ್ನು ಕಾಪಾಡಬೇಕೇ ಹೊರತು ಅನಾರೋಗ್ಯಕ್ಕೆ ಕಾರಣವಾಗಬಾರದು.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

Tags:
error: Content is protected !!