ಓದುಗರ ಪತ್ರ
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ ಸೇತುವೆಯ ಇಕ್ಕೆಲದಲ್ಲಿ ನಿರ್ಮಿಸಿರುವ ತಡೆಗೋಡೆಗಳು ಬಹುತೇಕ ಮುರಿದುಬಿದ್ದಿವೆ. ಹಾಗಾಗಿ ಸೇತುವೆ ಅಪಾಯಕಾರಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ರಸ್ತೆಯು ದಡದಹಳ್ಳಿ ದಾಟಿ ಮೈಸೂರಿಗೂ ಸಂಪರ್ಕಗೊಂಡಿದೆ. ಇಲ್ಲಿ ದ್ವಿಚಕ್ರ ವಾಹನಗಳು, ನಾಲ್ಕುಚಕ್ರ ವಾಹನಗಳು ಹೆಚ್ಚಾಗಿ ಸಂಚರಿಸುತ್ತವೆ. ಸೇತುವೆಯ ಬಳಿಯಲ್ಲಿ ರಸ್ತೆಯ ಡಾಂಬರು ಕಿತ್ತುಹೋಗಿ ಹಳ್ಳ-ಕೊಳ್ಳಗಳು ತಲೆಯೆತ್ತಿವೆ. ತಡೆಗೋಡೆಗಳೂ ಮುರಿದುಬಿದ್ದಿರುವ ಕಾರಣ ಅಪಘಾತ ಸಂಭವಿಸಬಹುದು. ಸ್ವಲ್ಪ ಹೆಚ್ಚುಕಡಿಮೆಯಾದರೂ ವಾಹನಗಳು ಎಣ್ಣೆಹೊಳೆಗೆ ಬೀಳುವಂತಹ ಸನ್ನಿವೇಶ ಇದೆ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಽಗಳು ಅಪಘಾತ ಸಂಭವಿಸುವ ಮೊದಲೇ ಎಚ್ಚೆತುಕೊಂಡು, ಈ ಸೇತುವೆಯ ದುರಸ್ತಿಗೆ ಕ್ರಮವಹಿಸಬೇಕು.
-ಮಂಜುನಾಥ್, ಕಡಕೊಳ, ಮೈಸೂರು ತಾ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…