ಕರ್ನಾಟಕ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲೂ ಮೀಸಲಾತಿ ಅಳವಡಿಸಿಕೊಳ್ಳಬೇಕು ಎಂದು ಆದೇಶಿಸಿರುವುದು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುತ್ತದೆ. ಇದು ಕಾಲೇಜು ಶಿಕ್ಷಣ ಇಲಾಖೆಗೂ ಅನ್ವಯ ಆಗಬೇಕು. ಈ ಇಲಾಖೆಯಲ್ಲಿ ಪ್ರತಿ ವರ್ಷ ಅತಿಥಿ ಉಪನ್ಯಾಸಕರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈಗ ಮೀಸಲಾತಿ ನಿಯಮದಡಿಯಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆಗೆ ಸರ್ಕಾರ ಆದೇಶ ನೀಡಬೇಕು. ಅದರಿಂದ ಅನೇಕ ಪ್ರತಿಭಾನ್ವಿತ ನಿರುದ್ಯೋಗಿ ಹಿಂದುಳಿದ ವರ್ಗಗಳ ಯುವಜನರಿಗೆ ಉದ್ಯೋಗ ಸಿಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ವಹಿಸಬೇಕು
-ಎಂ.ಆರ್.ಮಹೇಶ, ಮುಳ್ಳೂರು, ಸರಗೂರು ತಾ.