ದಸರಾ ಮಹೋತ್ಸವದ ಸಂದರ್ಭದಲ್ಲಿ ಬಲೂನ್ ಮಾರಾಟಕ್ಕಾಗಿ ದೂರದ ಕಲಬುರಗಿಯಿಂದ ಪೋಷಕರೊಡನೆ ನಗರಕ್ಕೆ ಆಗಮಿಸಿದ್ದ ಅಲೆಮಾರಿ ಸಮುದಾಯದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ.
ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಲಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಜ್ಯ ಸರ್ಕಾರ ಕೂಡಲೇ ಪ್ರಕರಣದ ಆರೋಪಿಗೆ ತಕ್ಕ ಶಿಕ್ಷೆ ನೀಡುವ ಮೂಲಕ ಹತ್ಯೆಗೀಡಾದ ಬಾಲಕಿಯ ಕುಟುಂಬಕ್ಕೆ ನ್ಯಾಯ ಕಲ್ಪಿಸಬೇಕು ಹಾಗೂ ಅಲೆಮಾರಿ ಸಮುದಾಯದವರಿಗೆ ಶಿಕ್ಷಣ, ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು



