ಓದುಗರ ಪತ್ರ
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ. ಈ ಕಾಲುವೆ ಎಡ ಭಾಗದಿಂದ ಸಾಗುವ ರಸ್ತೆ ಮಾರ್ಗವು ಶಾಂತವೇರಿ ಗೋಪಾಲಗೌಡ ನಗರ, ಲಾಲ್ ಬಹದ್ದೂರ್ ಶಾಸ್ತ್ರಿ ನಗರ, ಯಾಂದಳ್ಳಿ ಬಡಾವಣೆಗೆ ಸಂಪರ್ಕ ಕಲ್ಪಿಸುತ್ತದೆ. ಇವೆಲ್ಲ ಹೊಸ ಬಡಾವಣೆಗಳಾಗಿರುವುದರಿಂದ ಹೆಚ್ಚಾಗಿ ಮನೆಗಳು ನಿರ್ಮಾಣವಾಗುತ್ತಿವೆ.
ಈ ಕಾಲುವೆಯ ಪಕ್ಕ ಮಣ್ಣಿನ ರಸ್ತೆಯ ಮೂಲಕವೇ ಪ್ರತಿನಿತ್ಯ ನೂರಾರು ಜನರು ಅದರಲ್ಲೂ ಹೆಚ್ಚಾಗಿ ಜನ ಹೆಚ್ಚಾಗಿ ಕಟ್ಟಡ ಕಾರ್ಮಿಕರು ಸಂಚರಿಸುತ್ತಾರೆ. ವರುಣ ನಾಲೆಯ ಬಳಿ ತಡೆಗೋಡೆ ಹಾಗೂ ಬೀದಿ ದೀಪ ಇಲ್ಲದೇ ತೊಂದರೆಯಾಗಿದೆ. ಆದ್ದರಿಂದ ಅನಾಹುತಗಳು ಸಂಭವಿ ಸುವ ಮುನ್ನವೇ ಸಂಬಂಧಪಟ್ಟವರು ಕೂಡಲೇ ನಾಲೆಗೆ ತಡೆಗೋಡೆ ನಿರ್ಮಿಸಬೇಕು ಹಾಗೂ ಬೀದಿ ದೀಪದ ವ್ಯವಸ್ಥೆ ಕಲ್ಪಿಸಬೇಕು.
-ಅಹಲ್ಯ ಸಿ.ನಾ.ಚಂದ್ರ, ಜನತಾನಗರ, ಮೈಸೂರು
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…
ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದ್ದು, ರಾಘವ್ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.…
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…