Mysore
27
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಓದುಗರ ಪತ್ರ: ಬಸ್ ಶೆಲ್ಟರ್ ನಿರ್ಮಿಸಿ

ಮೈಸೂರಿನ ಬನ್ನೂರು ರಸ್ತೆಯಲ್ಲಿರುವ ಶ್ರೀರಂಗ ಎನ್‌ಕ್ಲೇವ್‌ನಲ್ಲಿ ನೂತನವಾಗಿ ಪ್ರಾರಂಭವಾಗಿರುವ ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಲಾ ಸಂಸ್ಥೆಯ ಬಹುತೇಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಾರಿಗೆ ಬಸ್ಸನ್ನೇ ಅವಲಂಬಿಸಿದ್ದಾರೆ. ಜಲ್ ಮಹಲ್ ಗೇಟ್ ಬಳಿ ಯಾವುದೇ ಬಸ್ ಶೆಲ್ಟರ್ ಇಲ್ಲದ ಕಾರಣ ಪ್ರತಿನಿತ್ಯ ಬಿಸಿಲಿನಲ್ಲಿ ನಿಂತು ಬಸ್ಸಿಗಾಗಿ ಕಾಯುವುದು, ಇಲ್ಲವೇ ರಸ್ತೆಯ ಮತ್ತೊಂದು ಬದಿಯಲ್ಲಿರುವ ಮರಗಳನ್ನು ಆಶ್ರಯಿಸಿ ಬಸ್ಸಿಗಾಗಿ ಕಾಯುವುದು ಅನಿವಾರ್ಯವಾಗಿದೆ. ಮಳೆಗಾಲದ ಸಂದರ್ಭದಲ್ಲಿ ಇಲ್ಲಿ ನಿಲ್ಲುವುದು ಹೆಚ್ಚು ಸುರಕ್ಷಿತವಲ್ಲ.

ಈ ಮಾರ್ಗದಲ್ಲಿ ಬಸ್‌ಗಳ ಸಂಖ್ಯೆ ವಿರಳವಾಗಿದ್ದು, ವಿದ್ಯಾರ್ಥಿಗಳು ಕೆಲವೊಮ್ಮೆ ಗಂಟೆಗಟ್ಟಲೆ ಕಾಯುವುದು ಅನಿವಾರ್ಯವಾಗಿದೆ. ಆದ್ದರಿಂದ ಸ್ಥಳೀಯ ಶಾಸಕರು ಮತ್ತು ಸಂಬಂಧಪಟ್ಟ ಇಲಾಖಾ ಅಽಕಾರಿಗಳು ಇದನ್ನ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಂಡು, ಈ ಕಾನೂನು ಕಾಲೇಜಿನ ಸಮೀಪ ಹೊಸದಾಗಿ ಬಸ್ ಶೆಲ್ಟರ್ ನಿರ್ಮಿಸಬೇಕು ಹಾಗೂ ಆ ಸ್ಥಳದಲ್ಲಿ ಬಸ್ ನಿಲುಗಡೆಯಾಗುವಂತೆ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು.

– ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.

Tags:
error: Content is protected !!