ನಂಜನಗೂಡು ಕೇಂದ್ರ ಬಸ್ ನಿಲ್ದಾಣ, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ಹೋಗುವಕೆಎಸ್‌ಆರ್‌ಟಿಸಿ ಬಸ್‌ಗಳು ಹಾಗೂ ಕೆಲ ಖಾಸಗಿ ಬಸ್‌ಗಳು ನಂಜನಗೂಡು ಕೈಗಾರಿಕಾ ಪ್ರದೇಶದ ಸಮೀಪ ನಿಲುಗಡೆ ನೀಡುತ್ತಿದ್ದು, ಈ ಭಾಗದಲ್ಲಿ ಬಸ್ ತಂಗುದಾಣವಿಲ್ಲದ ಪರಿಣಾಮ ಜನರು ಬಿಸಿಲು, ಮಳೆಯಲ್ಲಿಯೇ ನಿಂತು ಬಸ್‌ಗಾಗಿ ಕಾಯಬೇಕಾಗಿದೆ.
ಕನಕನಗರ, ಕತ್ವಾಡಿಪುರ ಸೇರಿದಂತೆ ಇಂಡಸ್ಟ್ರಿಯಲ್ ಏರಿಯಾ ಸುತ್ತಮುತ್ತಲ ಕೂಲಿ ಕಾರ್ಮಿಕರು, ನೌಕರರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ತಮ್ಮ ದಿನನಿತ್ಯದ ಕೆಲಸ ಕಾರ್ಯಗಳಿಗಾಗಿ ಮೈಸೂರಿಗೆ ಹೋಗಿಬರಲು ಇಲ್ಲಿಯೇ ನಿಂತು ಬಸ್‌ಗಾಗಿ ಕಾಯುತ್ತಾರೆ. ಆದರೆ, ಇಲ್ಲಿ ಬಸ್ ತಂಗುದಾಣವಿಲ್ಲದ ಪರಿಣಾಮ ಅವರು, ಬಿಸಿಲು, ಮಳೆಯಲ್ಲಿಯೇ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಕ್ಷೇತ್ರದ ಶಾಸಕರು ಈ ಬಗ್ಗೆ ಗಮನಹರಿಸಿ ನಂಜನಗೂಡು ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಿಕೊಡಬೇಕಿದೆ.
-ಅನಿಲ್ ಕುಮಾರ್, ನಂಜನಗೂಡು.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…