Mysore
22
few clouds

Social Media

ಶನಿವಾರ, 31 ಜನವರಿ 2026
Light
Dark

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲೇ ನಿಲ್ಲಬೇಕಾಗಿದೆ. ಮಳೆಗಾಲದಲ್ಲಿ ಬಸ್‌ಗಾಗಿ ಕಾಯುವವರು ಯಾವುದಾದರೂ ಅಂಗಡಿಗಳನ್ನು ಆಶ್ರಯಿಸುವುದು ಅನಿವಾರ್ಯವಾಗಿದೆ. ಸಂಬಂಧಪಟ್ಟವರು ಕೂಡಲೇ ಈ ಸ್ಥಳದಲ್ಲಿ ಬಸ್ ತಂಗುದಾಣವನ್ನು ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!